ಬೆಂಗಳೂರು,ಮಾರ್ಚ್,15,2022(www.justkannada.in): ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರದ ಜತೆ ಹಿಜಾಬ್ ಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದ್ದು ಇಂದು ಹೈಕೋರ್ಟ್ ತ್ರಿಸದಸ್ಯಪೀಠ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿಯಾಗಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಈ ಕುರಿತು ಮಾತನಾಡಿದ ಅರಗ ಜ್ಞಾನೇಂದ್ರ, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು. ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಡಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಎಲ್ಲಾ ಜಿಲ್ಲೆ ಡಿಸಿಗಳಿಗೆ ನಿರ್ದೇಶನ ನೀಡಲಾಗಿದ್ದು, ಡಿಸಿಗಳಿಗೆ ಶಾಲಾಕಾಲೇಜುಗಳಿಗೆ ರಜೆ ನೀಡುವ ಅಧಿಕಾರ ನೀಡಲಾಗಿದೆ. ಕೆಲವು ಕಡೆಗಳಲ್ಲಿ ಶಾಲಾಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
Key words: High Court -verdict – Hijab- today