ಬೆಂಗಳೂರು,ಫೆಬ್ರವರಿ,9,2022(www.justkannada.in): ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಸಂಬಂಧ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ಇದೆ. ಕೋರ್ಟ್ ತೀರ್ಪು ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿಸಿ ನಾಗೇಶ್, ಕೋರ್ಟ್ ಯಾವುದೇ ತೀರ್ಪು ಕೊಟ್ಟರು ಸರ್ಕಾರ ಮಾನ್ಯತೆ ಮಾಡುತ್ತದೆ. ಇದೇ ರೀತಿಯ ತೀರ್ಪು ಬರುತ್ತದೆ ಎಂದು ಹೇಳಲು ಆಗಲ್ಲ. ಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ರಾಜ್ಯದ ಕಾಲೇಜುಗಳ ಸ್ಥಿತಿಗತಿ ಬಗ್ಗೆ ಸಿಎಂ ಬೊಮ್ಮಾಯಿಗೆ ಮಾಹಿತಿ ನೀಡಿದ್ದೀವಿ. ಈಗಿನ ಪರಿಸ್ಥಿತಿ ನೋಡಿದರೆ ಈ ಘಟನೆಗಳ ಹಿಂದೆ ಕಾಣದ ಕೈಗಳು ಇದೆ ಅನ್ನೋ ಅನುಮಾನ ಮೂಡುತ್ತಿದೆ ಎಂದರು.
ಈ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಜತೆ ಎಜಿ ಪ್ರಭುಲಿಂಗ ನಾವದಗಿ ಇಂದು 40 ನಿಮಿಷ ಚರ್ಚೆ ನಡೆಸಿದರು. ಅದಕ್ಕೂ ಮುನ್ನ, ಸಿಎಂ ಬೊಮ್ಮಾಯಿ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಉನ್ನತ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದರು.
Key words: Hijab- controversy- Education Minister -BC Nagesh.