ನವದೆಹಲಿ,ಫೆಬ್ರವರಿ,22,2023(www.justkannada.in): ಹಿಜಾಬ್ ವಿವಾದ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ಸುಪ್ರೀಂಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದು, ಅರ್ಜಿ ವಿಚಾರಣೆಗೆ ಪೀಠ ರಚನೆ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಹೇಳಿದ್ದಾರೆ.
ಕಾಲೇಜು ಆವರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಕರ್ನಾಟಕ ನಿಷೇಧಿಸಿರುವ ಕುರಿತು ವಿಚಾರಣೆ ಮಾಡಲು ಸಮಯ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಈ ಪ್ರಕರಣವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ವಕೀಲ ಶಾದನ್ ಫರಾಸತ್ ಪ್ರಸ್ತಾಪಿಸಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದಿಂದಾಗಿ ಹುಡುಗಿಯರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿನಿಯರು ಈಗಾಗಲೇ ಒಂದು ವರ್ಷವನ್ನು ಕಳೆದುಕೊಂಡಿದ್ದಾರೆ ಮತ್ತು ಮುಂಬರುವ ಪರೀಕ್ಷೆಗಳು ಮಾರ್ಚ್ 9 ರಂದು ಪ್ರಾರಂಭವಾಗಲಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ತ್ರಿಸದಸ್ಯ ಪೀಠವು ಶೀಘ್ರದಲ್ಲೇ ವಿಚಾರಣೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ನ್ಯಾಯಾಲಯವು ಅರ್ಜಿದಾರರಿಗೆ ಭರವಸೆ ನೀಡಿದೆ.
Key words: Hijab controversy – Supreme Court –again- petition