ಬೆಂಗಳೂರು,ಫೆಬ್ರವರಿ,8,2022(www.justkannada.in): ಹಿಜಾಬ್ ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಹಬ್ಬಿದ್ದು ಕೆಲ ಜಿಲ್ಲೆಗಳಲ್ಲಿ ಪ್ರತಿಭಟನೆ, ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದ ಜಿಲ್ಲೆಗಳಲ್ಲಿ ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, 5 ಸಾವಿರ ಪಿಯು ಕಾಲೇಜುಗಳ ಪೈಕಿ 10ರಿಂದ 12 ಕಾಲೇಜುಗಳಲ್ಲಿ ಸಂಘರ್ಷ ಉಂಟಾಗಿದೆ. ಇಂತಹ ಘಟನೆಗಳಿಂದ ಮಕ್ಕಳು ಆತಂಕಕ್ಕೆ ಒಳಗಾಗುತ್ತಾರೆ. ಪರಿಸ್ಥಿತಿ ಹತೋಟಿಗೆ ಬಾರದಿದ್ದರೇ ರಜೆ ಘೋಷಣೆ ಮಾಡಿ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡುವಂತೆ ಡಿಸಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಸದ್ಯ ಕೇಸರಿ ಶಾಲು, ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಿದ್ದು ವಾದ ಪ್ರತಿವಾದ ಮುಂದುವರೆದಿದೆ.
Key words: hijab-minister-bc nagesh