ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಸಚಿವ ಕೆ.ಎಸ್ ಈಶ್ವರಪ್ಪ ಸವಾಲು

ಮೈಸೂರು,ಫೆಬ್ರವರಿ,8,2022(www.justkannada.in): ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವೆ  ಧೈರ್ಯವಿದ್ದರೆ  ತಡೆಯಿರಿ ಎಂದು  ಹೇಳಿಕೆ ನೀಡಿದ್ಧ ಕಲಬುರಗಿ ಕಾಂಗ್ರೆಸ್ ಶಾಸಕಿ ಖನೀಜಾ ಫಾತಿಮಾಗೆ ತಿರುಗೇಟು ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪ,  ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಹಿಜಾಬ್ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು‌ ಮಸೀದಿಗೆ ಹೋಗಲು ಅವಕಾಶ ಇದೆ.? ನಾವು ಶಾಲೆಗೆ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ, ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು ಎಂದು ಕಿಡಿಕಾರಿದರು.

ಕಾನೂನು ಪಾಲನೆ ಮಾಡಬೇಕೋ ಬೇಡವೋ ಸಿದ್ದರಾಮಯ್ಯ ಸ್ಪಷ್ಟಪಡಿಸಲಿ.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದವೂ ವಾಗ್ದಾಳಿ ನಡೆಸಿದ  ಸಚಿವ ಕೆ.ಎಸ್ ಈಶ್ವರಪ್ಪ. ಸಿದ್ದರಾಮಯ್ಯ ತಾನು ಎರಡನೇ ಅಂಬೇಡ್ಕರ್ ಅಂತಾ ಹೇಳಿಕೊಳ್ಳುತ್ತಾರೆ. ಅವರಿಗೆ ಸಂವಿಧಾನ ಕಾನೂನು ಗೊತ್ತಿಲ್ಲವಾ.? ಸಿಎಂ ಆಗಿದ್ದವರಿಗೆ ನ್ಯಾಯಾಲಯದ ಆದೇಶ ಕಾನೂನು ಗೊತ್ತಿಲ್ಲವಾ.? ಕೇರಳದ ಹೈ ಕೋರ್ಟ್ ಏನು ಹೇಳಿದೆ ಎಂಬುದನ್ನು ಸಿದ್ದರಾಮಯ್ಯ ಓದಿ ಕೊಳ್ಳಲಿ. ಸರ್ಕಾರದ ಆದೇಶ ಮಾಡಿದೆ ಈ ಬಗ್ಗೆ ಕಾಂಗ್ರೆಸ್ ನಿಲುವ ಸ್ಪಷ್ಟನೆ ಮಾಡಿ. ಕಾನೂನು ಪಾಲನೆ ಮಾಡಬೇಕೋ ಬೇಡವೋ ಸಿದ್ದರಾಮಯ್ಯ ಸ್ಪಷ್ಟಪಡಿಸಲಿ ಎಂದು ಗುಡಗಿದರು.

ಹಿಜಾಬ್ ವಿಚಾರದಲ್ಲಿ ಎಂ.ಎಲ್.ಸಿ ಸಿಎಂ‌ ಇಬ್ರಾಹಿಂ ಹೇಳಿಕೆ  ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ,  ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ‌ ನೋಡಲು ಹಿಜಾಬ್ ತೆಗೆಯಬೇಕಾ.? ಇಬ್ರಾಹಿಂ ಅವರ ಈ ಹೇಳಿಕೆ ಯಾರು ಒಪ್ಪುವಂತದಲ್ಲ. ಸಮವಸ್ತ್ರದ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ ಎಂದರು.

Key words: hijab-Minister -KS Eshwarappa

ENGLISH SUMMARY….

If you have guts try to allow muslim women into masjid: Minister K.S. Eshwarappa challenges MLA
Mysuru, February 8, 2022 (www.justkannada.in): Following a statement by Congress MLA Khanija Fatima, challenging the government to stop her from entering Vidhana Soudha wearing a hijab, Minister K.S. Eshwarappa has asked her to try if she can struggle to allow Muslim women to enter masjids.
Speaking in Mysuru today, he said, “It is not about attending the cabinet session wearing a hijab, try to enter a masjid. How many women are allowed to enter a masjid? We have prohibited hijab only in schools, not outside,” he said.
He also said, “Siddaramaiah claims he is a second Ambedkar. Is he not aware of the constitution? Does a person who was a CM don’t know whether court orders should be followed or not? Let Siddaramaiah read what the Kerala High Court has said. Let Congress clarify it. Is it required to follow the law or not, let Siddaramaiah clarify,” he challenged.
Keywords: Hijab/ Minister K.S. Eshwarappa/ MLA Khanija Fatima