ಉಡುಪಿ, ಫೆಬ್ರವರಿ,7,2022(www.justkannada.in): ಹಿಜಾಬ್, ಕೇಸರಿ ಶಾಲು ವಿವಾದದ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ ಬೆನ್ನಲ್ಲೆ ರಾಜ್ಯ ಸರ್ಕಾರ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದು ಸರ್ಕಾರದ ಆದೇಶಕ್ಕೂ ಸೆಡ್ಡು ಹೊಡೆದು ವಿದ್ಯಾರ್ಥಿನೀಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ಇಂದು ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹೀಗಾಗಿ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಮತ್ತೆ ಇಂದು ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹೀಗಾಗಿ ಅವರನ್ನ ಕಾಲೇಜಿನ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.
ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿರುವ ವಿದ್ಯಾರ್ಥಿನಿಯರನ್ನು ಹಿಜಾಬ್ ತೆಗೆದು ತರಗತಿಗೆ ಹಾಜರಾಗುವಂತೆ ಪ್ರಾಂಶುಪಾಲರು, ಉಪನ್ಯಾಸಕರು ಮನವೊಲಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿನಿಯರು ಮಾತ್ರ ನಮ್ಮ ಮನೆಯಲ್ಲಿ ಹೇಳಿ ಕಳುಹಿಸಿದ್ದಾರೆ. ನಾವು ಸ್ಕಾರ್ಫ್ ತೆಗೆಯೋದಿಲ್ಲ. ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟ್ ಸೂಚನೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
Key words: hijab-students-College