ಹಿಮಾಚಲ ಪ್ರದೇಶ,ಡಿಸೆಂಬರ್,8,2022(www.justkannada.in): ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಗುಜರಾತ್ ನಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸುತ್ತಿದೆ.
ಈ ನಡುವೆ ಹಿಮಾಚಲ ಪ್ರದೇಶದ ಹಾಲಿ ಸಿಎಂ ಜೈರಾಮ್ ಠಾಕೂರ್ ಜಯಭೇರಿ ಬಾರಿಸಿದ್ದಾರೆ. ಸೆರಾಜ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೈರಾಮ್ ಠಾಕೂರ್, 24,425 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಹಿಮಾಚಲ ಪ್ರದೆಶದಲ್ಲಿ ಬಿಜೆಪಿ 31 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು ಆರಂಭಿಸಿದ್ದು, ಪಕ್ಷೇತರರು ಹಾಗೂ ರೆಬಲ್ಸ್ ಅಭ್ಯರ್ಥಿಗಳ ಜೊತೆ ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ.
Key words: Himachal Pradesh-election- CM- Jairam Thakur -won