ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟಿಂಗ್,  ಖಾಸಗಿ ವಾಹನಗಳಿಗೆ ಅವಕಾಶ: ಪರಿಸರವಾದಿ, ರೈತರಿಂದ ಆಕ್ರೋಶ.

ಚಾಮರಾಜನಗರ,ಏಪ್ರಿಲ್,9,2025 (www.justkannada.in): ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣಕ್ಕೆ,  ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳ ನಡೆಗೆ ಪರಿಸರವಾದಿ, ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವನ್ಯಜೀವಿ ಸೂಕ್ಷ್ಮ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳಿಗೆ ನಿಷೇಧವಿದ್ದರೂ ನಿಯಮ ಉಲ್ಲಂಘನೆ ಮಾಡಿ ಅರಣ್ಯ ಇಲಾಖೆ ಶೂಟಿಂಗ್ ಗೆ ಅವಕಾಶ ಮಾಡಿ ಕೊಟ್ಟಿದೆ. ಕೇರಳ ರಾಜ್ಯದ ವಾಹನಗಳನ್ನು ಬಿಟ್ಟು ಸಿನಿಮಾ ಶೂಟಿಂಗ್ ಮಾಡಲು ಅರಣ್ಯ ಇಲಾಖೆ ಅನುಮತಿ ಕೊಟ್ಟಿದೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕೇವಲ ಸರ್ಕಾರಿ ಬಸ್ ಮತ್ತು ಇಲಾಖೆ ವಾಹನಗಳಿಗಷ್ಟೇ ಅವಕಾಶವಿದ್ದು, ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ.  ಆದರೂ ಸಹ  ಬೆಟ್ಟದಲ್ಲಿ ಸಿನಿಮಾ ಶೂಟಿಂಗ್ ಮಾಡಲು ಅವಕಾಶ ಕೊಟ್ಟಿದ್ದು, ಅರಣ್ಯ ಇಲಾಖೆಯ ಈ ನಿರ್ಧಾರಕ್ಕೆ ಪರಿಸರವಾದಿ ಜೋಸೆಫ್ ಹೂವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Key words: Film shooting, Himavad Gopalaswamy Hills, Environmentalists, farmers,  outraged.