ನವದೆಹಲಿ, ಜೂ.3,2019(www.justkannada.in): ಮೇಲೆ ಹಿಂದಿ ಹೇರಿಕೆಗೆ ಮುಂದಾಗಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ದಕ್ಷಿಣ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಷ್ಟ್ರೀಯ ಶಿಕ್ಷಣ ಕರಡು ನೀತಿಯನ್ನು ಕೇಂದ್ರ ಸರಕಾರ ಬದಲಾಯಿಸಿದ್ದು, ಹಿಂದಿ ಭಾಷಾ ಕಲಿಕೆ ಕಡ್ಡಾಯವಲ್ಲ ಎಂದು ಹೇಳಿದೆ.
ತ್ರಿಭಾಷಾ ಸೂತ್ರದಂತೆ ಸ್ಥಳೀಯ ಭಾಷೆಯೊಂದಿಗೆ ಹಿಂದಿ ಭಾಷಾ ಕಲಿಕೆ ಎಂದು ಈ ಹಿಂದೆ ಕೇಂದ್ರ ಸರಕಾರ ಹೇಳಿತ್ತು. ಆದರೆ ಇದಕ್ಕೆ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ವಿರೋಧದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ಕರಡು ನೀತಿಯನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದ್ದು, ಹಿಂದಿ ಭಾಷೆ ಕಲಿಕೆ ಕಡ್ಡಾಯವಲ್ಲ ಎಂದು ತಿಳಿಸಿದೆ.
ಹಾಗೆಯೇ 6ನೇ ತರಗತಿ ಬಳಿಕ ವಿದ್ಯಾರ್ಥಿ ಇಚ್ಛೆಯಂತೆ ಭಾಷೆ ಆಯ್ಕೆ ಮಾಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Key words: Hindi language learning is not mandatory – central government.
#Hindilanguage #learning #notmandatory #centralgovernment.