ಬೆಂಗಳೂರು,ಸೆಪ್ಟಂಬರ್,15,2021(www.justkannada.in): ಬಿಜೆಪಿಯವರು ಹಿಂದುತ್ವ ಹೇಳುತ್ತಾ ರಾಮನ ಜಪ ಮಾಡ್ತಾರೆ. ಆದರೆ ದೇವಸ್ಥಾನ ಒಡೆದು ಹಾಕ್ತಾರೆ. ಬಿಜೆಪಿಯದ್ದು ಡೋಂಗಿ ಹಿಂದುತ್ವ ವೋಟ್ ಗೋಸ್ಕರ ಹಿಂದುತ್ವ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದರು.
ವಿಧಾನಸೌಧದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಿಷ್ಟು.
ಸರ್ಕಾರದ ಗಮನಕ್ಕೆ ತರದೇ ಮುಖ್ಯಕಾರ್ಯದರ್ಶಿಗಳು ದೇವಸ್ಥಾನ ತೆರವುಗೊಳಿಸುವ ಕುರಿತು ಪತ್ರ ಬರೆಯಲು ಸಾಧ್ಯವಿಲ್ಲ. 15ನೇ ತಾರೀಖಿನಿಂದ ಜಿಲ್ಲಾಧಿಕಾರಿಗಳು ಹಾಗೂ ತಹಶಿಲ್ದಾರರು ಸುಪ್ರೀಂ ಕೋರ್ಟ್ ನ ತೀರ್ಮಾನದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತವಾದ ಮೇಲೆ ತಮ್ಮ ಮಾನ ಉಳಿಸಿಕೊಳ್ಳಲು ಸರ್ಕಾರ ಬಣ್ಣ ಬದಲಾಯಿಸಿದೆ. ಈಗ ಅವರಿಗೆ ಒಡೆಯಬೇಡಿ ಎಂಬ ಸೂಚನೆ ಕೊಡ್ತೀವಿ ಎನ್ನುತ್ತಿದ್ದಾರೆ. ಸರ್ಕಾರದ ಗಮನಕ್ಕೆ ಬಾರದೆ ದೇವಾಲಯ ಒಡೆದಿದ್ದಾರ? ಮೈಸೂರು ಸಂಸದರು ಈಗ ದೇವಾಲಯ ಒಡೆದು ಆದಮೇಲೆ ಮಾತಾಡ್ತಾರೆ. ಇದರ ಬದಲು ಸರ್ಕಾರದ ಗಮನಕ್ಕೆ ತಂದು ದೇವಸ್ಥಾನ ಒಡೆಯುವುದನ್ನು ತಡೆಯಬೇಕಿತ್ತು.
ಹಿಂದೂ ದೇವಾಲಯಗಳನ್ನು ಬಿಜೆಪಿಯವರೇ ನಾಶ ಮಾಡೋದು. ಮಾತಾಡಿದ್ರೆ ರಾಮನ ಜಪ, ರಾಮ ಮಂದಿರ ಕಟ್ಟುತ್ತೇವೆ ಅಂತ ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಭಕ್ತರ ಗಮನಕ್ಕೆ ತಂದು ಪರ್ಯಾಯ ವ್ಯವಸ್ಥೆ ಮಾಡಿ ಆಮೇಲೆ ದೇವಸ್ಥಾನ ಕೆಡವಬಹುದಿತ್ತು. ಏಕಾಏಕಿ ದೇವಸ್ಥಾನ ದ್ವಂಸ ಮಾಡಿರುವುದು ಬಿಜೆಪಿಯವರ ಢೋಂಗಿತನವನ್ನು ತೋರಿಸುತ್ತದೆ. ಹಿಂದುತ್ವವಾದ ಎನ್ನೋದು ಕೇವಲ ರಾಜಕಾರಣಕ್ಕಾಗಿ, ಓಟಿಗಾಗಿ ಮಾತ್ರ, ಅಸಲಿಗೆ ಬಿಜೆಪಿಯವರಿಗೆ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಿದ್ಧರಾಮಯ್ಯ ಹರಿಹಾಯ್ದರು.
ಸುಪ್ರೀಂ ಕೋರ್ಟ್ ನಿರ್ಣಯ ಬಂದಿದ್ದು ಇವತ್ತು ನಿನ್ನೆಯದಲ್ಲ. ಸರ್ಕಾರ ಇಷ್ಟು ದಿನ ಏನು ಮಾಡ್ತಾ ಇತ್ತು? ಬಿಜೆಪಿ ಸರ್ಕಾರ ಬಂದು ಎರಡೂವರೆ ವರ್ಷ ಆಯ್ತು, ಈಗ ಯಾಕೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ನಾಟಕ? ಇದು ಢೋಂಗಿತನವಲ್ಲದೆ ಇನ್ನೇನು? ನಾವು ಬಿಜೆಪಿಯವರಂತೆ ರಾಜಕೀಯಕ್ಕಾಗಿ ಧರ್ಮ, ದೇವರನ್ನು ಬಳಸಿಕೊಳ್ಳಲ್ಲ ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದರು.
ನಾವು ಯಾವ ಆಪರೇಷನ್ ಮಾಡಲ್ಲ, ಯಾರನ್ನೂ ಬಲವಂತವಾಗಿ ಪಕ್ಷಕ್ಕೆ ಕರೆತರಲ್ಲ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ, ಪಕ್ಷಕ್ಕೆ ಬದ್ಧರಾಗಿ ಇರುತ್ತೇನೆಂದು ಬರುವವರಿಗೆ ಪಕ್ಷದಲ್ಲಿ ಅವಕಾಶ ಇದೆ ಎಂದು ಸಿದ್ಧರಾಮಯ್ಯ ಹೇಳಿದರು.
Key words: Hindutva –Rama- Japa-temple –smashed-former CM-Siddaramaiah
ENGLISH SUMMARY…
Cong. leader Siddaramaiah lambasts BJP for demolishing temples
Bengaluru, September 15, 2021 (www.justkannada.in): “The BJP people speak a lot about Hindutva and do Ramanama Jap. On the other hand, they demolish temples. The BJP’s Hindutva is just a bluff, their Hindutva is just to attract votes,” opined Leader of the Opposition in the Assembly Siddaramaiah.
In his address in the Assembly session today Siddaramaiah said, “The Chief Secretary can’t evict temple without bringing it to the notice of the government. The Deputy Commissioner and Tahasildar are demolishing religious structures in public places from the 15th of last month as per the orders of the Supreme Court. Due to public uproar over the temple demolition, now BJP government is changing its colours to save its dignity. Now they are saying that they will issue orders not to demolish. Did they demolish the temple without bringing it to the notice of the government? The Mysuru MP is speaking after demolition. He should have brought it to the notice of the government and should have prevented it,” he said.
“We are not like them, we won’t indulge in any kind of ‘Operation,’ we won’t force anyone to come to our party. Our party is based on ethics and our party is open to those who are committed to the ethics of the party,” Siddaramaiah said.
Keywords: Leader of the Opposition/ Siddaramaiah/ BJP/ temple demolition/ assembly session/ lambasts