ನವದೆಹಲಿ,ಜನವರಿ,9,2021(www.justkannada.in): ಜನವರಿ 16 ರಿಂದ ದೇಶದಲ್ಲಿ ಕೊರೋನಾ ವಿರುದ್ಧ ಐತಿಹಾಸಿಕ ಅಭಿಯಾನ ಆರಂಭವಾಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ದೇಶದಲ್ಲಿ ಜನವರಿ 16ರಿಂದ ಕೋವಿಡ್ ತುರ್ತು ಲಸಿಕೆಯನ್ನು ವಿತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಒಟ್ಟು 30 ಕೋಟಿ ಲಸಿಕೆಯನ್ನು ಹಾಕುವ ಗುರಿ ಹೊಂದಿದ್ದು ಆರಂಭಿಕ ಹಂತದಲ್ಲಿ ಮೂರು ಕೋಟಿ ಮಂದಿಗೆ ಲಸಿಕೆ ಹಾಕಲಾಗುವುದು. ಎರಡನೇ ಹಂತದಲ್ಲಿ 27 ಕೋಟಿ ಲಸಿಕೆ ಹಾಕಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಜನವರಿ 16 ರಿಂದ ದೇಶಾದ್ಯಂತ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಲಿದೆ. ವೈದ್ಯರು, ಆರೋಗ್ಯ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಈ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಐತಿಹಾಸಿಕ ಹೆಜ್ಜೆ ಇಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Key words: Historical campaign- against -Corona – Jan 16-Prime Minister -Narendra Modi