ಬೆಂಗಳೂರು, ಜನವರಿ,6,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್‌ಎಂಪಿವಿ ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ 8 ತಿಂಗಳ ಮಗು ಹಾಗೂ ಇನ್ನೊಂದು ಮಗುವಿನಲ್ಲಿ ಎಚ್‌ಎಂಪಿವಿ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 8 ತಿಂಗಳ ಮಗುವಿನಲ್ಲಿ ಶೀತ, ಜ್ವರ ಬಂದಿದ್ದ ಕಾರಣ ಹೆತ್ತವರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಎಚ್‌ಎಂಪಿವಿ ಕಂಡುಬಂದಿದೆ. ಇದೀಗ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮತ್ತೊಂದು ಮೂರು ತಿಂಗಳ ಮಗುವಿನಲ್ಲಿ ಹೆಚ್ ಎಂಪಿವಿ ವೈರಸ್ ಪತ್ತೆಯಾಗಿದೆ. ಇಂದು ಇಬ್ಬರು ಮಕ್ಕಳಲ್ಲಿ ಈ ಹೆಚ್ ಎಂಪಿವಿ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಧಿಕಾರಿಗಳು ತುರ್ತು ವರ್ಚುವಲ್ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
Key words: HMPV, virus, two children, Bengaluru