ಬೆಂಗಳೂರು,ನವೆಂಬರ್,16,2020(www.justkannada.in) ; ಮರಾಠಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಾನತೆಗೆ ಅವಕಾಶವಾಗುತ್ತದೆ, ಈ ಸಮುದಾಯದಲ್ಲಿ ಅತ್ಯಂತ ಬಡವರು ಮತ್ತು ಹಿಂದುಳಿದವರಿದ್ದಾರೆ. ಅವರ ಸಮಗ್ರ ಅಭಿವೃದ್ಧಿಗೆ ಈ ನಿಗಮದ ಸ್ಥಾಪನೆ ಸೂಕ್ತ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸಮರ್ಥಿಸಿದ್ದಾರೆ.
ಕೇವಲ ಭಾಷೆಯ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರಾಠಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕೈಗೊಂಡ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಅವರು ಮರಾಠ ಎಂದಾಕ್ಷಣ ಕೇವಲ ಭಾಷೆಯ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ. ಇದು ಸಮುದಾಯದ ಅಭಿವೃದ್ಧಿ ಹಾಗೂ ಈ ನಿಗಮವನ್ನು ಸ್ಥಾಪಿಸಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅತ್ಯಂತ ಸಮರ್ಪಕವಾಗಿದೆ ಎಂದು ಡಿಸಿಎಂ ಸವದಿ ತಿಳಿಸಿದ್ದಾರೆ.
key words ; holistic-development-Marathi-Suitable-establishment-corporation-DCM-Savadi-Justification