ಬೆಂಗಳೂರು,ಜುಲೈ,27,2023(www.justkannada.in): ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಪ್ರತಿಭಟನೆ ನಡೆಸಲಿದರು.
ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನ ತಡೆದಿದ್ದು, ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದರು.
ಬಿಜೆಪಿ ಪ್ರತಿಭಟನೆ ಹಿನ್ನೆಲೆ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಪೊಲೀಸ್ ಭದ್ರತೆ ವಹಿಸಲಾಗಿದ್ದು, ಒಂದು ಕೆಎಸ್ಆರ್ಪಿ ತುಕಡಿ ಕೂಡ ನಿಯೋಜನೆ ಮಾಡಲಾಗಿದೆ
Key words: Home Minister- Dr. G. Parameshwar –residence- BJP workers-protest