ಬೆಂಗಳೂರು,ಜುಲೈ ,28,2023(www.justkannada.in): ಉಡುಪಿ ಕಾಲೇಜು ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಸೂಕ್ತಕ್ರಮಕ್ಕೆ ಆಗ್ರಹಿಸಿ ನಿನ್ನೆ ಗೃಹ ಸಚಿವ ಡಾ ಜಿ. ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
10 ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 149ರ ಅಡಿಯಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಉಡುಪಿ ಕಾಲೇಜು ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ತಪ್ಪಿತಸ್ಥರನ್ನ ಬಂಧಿಸಿವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚ ನಿನ್ನೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಸದಾಶಿವನಗರದ ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದರು.
ಈ ವೇಳೆ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದರು. ಇದೀಗ 10 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎನ್ನಲಾಗುತ್ತಿದೆ.
Key words: Home Minister- residence-protest- FIR -against -BJP -Yuva Morcha -workers.