ಬೆಂಗಳೂರು,ಏಪ್ರಿಲ್,18,2021(www.justkananda.in) : ಛತ್ತೀಸಗಢದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ರಾಜಧಾನಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಯಪುರ ಜಿಲ್ಲಾಧಿಕಾರಿ ಭಾರತಿ ದಾಸನ್ ಆದೇಶಿಸಿದ್ದು, ನಗರದ ಎಲ್ಲಾ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಸುರಕ್ಷತಾ ವ್ಯವಸ್ಥೆಗಳ ತಪಾಸಣೆ ನಡೆಸುವಂತೆಯೂ ಅವರು ಸೂಚಿಸಿದ್ದಾರೆ.
ಒಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟರೆ, ಮೂವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಆಸ್ಪತ್ರೆಯ ಮಾಲೀಕರ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
key words : Hospital fire-4 Corona-Infected-Death