ಮನೆಯೊಂದು ನೂರು ಬಾಗಿಲಾಗಿರುವ ಕಾಂಗ್ರೆಸ್ ನಲ್ಲಿ ನಿಮ್ಮ ಸ್ಥಾನ ಭದ್ರಪಡಿಸಿಕೊಳ್ಳಿ : ಸಿದ್ದರಾಮಯ್ಯಗೆ ಸಿ.ಟಿ.ರವಿ ಟಾಂಗ್

ಬೆಂಗಳೂರು,ಅಕ್ಟೋಬರ್,23,2020(www.justkannada.in) :  ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್ ವೈ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ನೀವು ಮೊದಲು ನಿಮ್ಮ ಮನೆಯ ಯಜಮಾನ ಯಾರು ಅನ್ನುವುದನ್ನು ನಿರ್ಧಾರ ಮಾಡಿ. ಮನೆಯೊಂದು ನೂರು ಬಾಗಿಲು ಎಂಬಂತ್ತಿರುವ ನಿಮ್ಮ ಪಕ್ಷವನ್ನು, ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

jk-logo-justkannada-logo

ನಮ್ಮ ಪಕ್ಷ ವಿಧಾನ ಪರಿಷತ್ತಿನ 4 ಸ್ಥಾನಗಳನ್ನು ಹಾಗೂ ವಿಧಾನಸಭೆಯ 2 ಕ್ಷೇತ್ರಗಳಲ್ಲಿ ಜಯಶಾಲಿಯಾಗುತ್ತದೆ. ಹಾಗಾಗಿ, ಸೋಲನ್ನು ಯಾರ ತಲೆಗೆ ಕಟ್ಟುವುದು ಎಂಬ ವಿಚಾರ ನಿಮ್ಮ ಪಕ್ಷಕ್ಕೆ ಅನ್ವಯವಾಗುವಂತದ್ದು. ನೀವು ಬಿಜೆಪಿಯ ಚಿಂತೆ ಬಿಟ್ಟುಬಿಡಿ ಟ್ವೀಟ್ ಮಾಡಿದ್ದಾರೆ.

ಬದುಕಿನಲ್ಲಿ ನೋವು, ಬೇಸರ ಸಾಮಾನ್ಯ. ಆದರೆ, ನೋವನ್ನು ಹೇಳಿಕೊಳ್ಳುವ ಅದಕ್ಕೆ ಪರಿಹಾರ ಕಂಡುಕೊಳ್ಳುವ ದಾರಿಗಳಿದ್ದಾವೆ. ಅದಿಲ್ಲದಿದ್ದಾಗ ನಾಲಗೆ ಹರಿಬಿಡುವುದೊಂದೆ ದಾರಿಯಾಗುತ್ತದೆ. ಅಂತಹ ಪರಿಸ್ಥಿತಿ ತಮಗೆ ನಿರ್ಮಾಣವಾಗಿರುವುದು ವಿಷಾದನೀಯ ಮಾಜಿ ಮುಖ್ಯಮಂತ್ರಿಗಳೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಮೂಲೆಗುಂಪಾಗುತ್ತಿರುವ ನೋವು ತೋಡಿಕೊಳ್ಳುವ ದಾರಿಯಿಲ್ಲ

ಹಿಂದೊಂದು ಪಕ್ಷ ತಮ್ಮನ್ನು ಮೂಲೆಗುಂಪು ಮಾಡಿದ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡದ್ದನ್ನು ಮರೆಯದಿರಿ. ಈಗ ಕಾಂಗ್ರೆಸ್ ಪಕ್ಷದಲ್ಲಿ ಮೂಲೆಗುಂಪಾಗುತ್ತಿರುವ ನೋವನ್ನು ತೋಡಿಕೊಳ್ಳುವ ದಾರಿಯಿಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದೀರಿ. ಇದು ದುರದೃಷ್ಟಕರ ಮತ್ತು ಅತ್ಯಂತ ಕೀಳು ಮಟ್ಟದ ರಾಜಕೀಯ ಎಂದು ಕಿಡಿಕಾರಿದ್ದಾರೆ.

house-hundred-door-congress-Secure-your-position-Siddaramaiah-C.T.Ravi 

ತಾವು ಯಾರ ಪರ ಎಂಬ ರಾಜಕೀಯ ಮುಖವಾಡ ಹಾಕಿಕೊಂಡಿದ್ದೀರೊ ಅಂತವರ ವಿರುದ್ಧವೇ ನಡೆದುಕೊಂಡು ಅವರ ಭವಿಷ್ಯಕ್ಕೆ ತೆರೆ ಎಳೆದ ಉದಾಹರಣೆಗಳು ಸಾಕಷ್ಟಿವೆ. ಯದ್ಭಾವಂ ತದ್ಭವತಿ ಅನ್ನುವ ಉಕ್ತಿಯಂತೆ ಈಗ ಇಡೀ ಪ್ರಪಂಚವೆ ಆ ರೀತಿ ಇದೆ ಎಂದು ಸಾರಿ ಹೇಳುತ್ತಿರುವುದು ಯಾಕೆ ಮಾಜಿ ಮುಖ್ಯಮಂತ್ರಿಯವರೆ? ಎಂದು ಪ್ರಶ್ನೆ ಮಾಡಿದ್ದಾರೆ.

ಮತ್ತೊಮ್ಮೆ ಸಿಎಂ ಆಸೆಯನ್ನು ವ್ಯಕ್ತಪಡಿಸಿರುವುದು ಯಾರನ್ನು ಕೆಡುವ ಟಾಸ್ಕ್?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಸೆಯನ್ನು ವ್ಯಕ್ತಪಡಿಸಿದ್ದು, ಯಾರನ್ನು ಕೆಡುವ ಟಾಸ್ಕ್? ಎಂದು ಪ್ರಶ್ನಿಸಿದ್ದಾರೆ.

ಮತ್ತೊಮ್ಮೆ ಮುಖ್ಯಮಂತ್ರಿಯಾದರೆ  ಎಂಬ ಹೊಸ ಆಸೆ ಯಾರನ್ನು ಕೆಡುವ ಟಾಸ್ಕ್

ಕಳೆದ ಚುನಾವಣೆಯ ಸಮಯದಲ್ಲಿ `ಇದೇ ನನ್ನ ಕೊನೆಯ ಚುನಾವಣೆ’ ಎಂದಿದ್ದಿರಿ. ಇತ್ತೀಚೆಗೆ `ಮತ್ತೊಮ್ಮೆ ಮುಖ್ಯಮಂತ್ರಿಯಾದರೆ  ಎಂಬ ಹೊಸ ಆಸೆಯನ್ನು ವ್ಯಕ್ತಪಡಿಸಿದ್ದೀರಿ. ಇದು ಯಾರನ್ನು `ಕೆಡುವ ಟಾಸ್ಕ್?’ ಎಂದು ನಾವು ಕೇಳಬಹುದಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಕಟೀಲ್ ಅವರ ಬಗ್ಗೆ ನೀವು ಆಡಿರುವ ಮಾತುಗಳು ಯಾವುದೇ ಪ್ರತಿಕ್ರಿಯೆಗೆ ಯೋಗ್ಯವಾದದ್ದಲ್ಲ. ಇಂತಹ ಮಾತುಗಳ ಬಗ್ಗೆ ದಾಸಶ್ರೇಷ್ಠ ಪುರಂದರದಾಸರು ಶತಮಾನಗಳ ರಚಿಸಿದ್ದ ಕೀರ್ತನೆ ನಿಮಗೆ ಗೊತ್ತಿರಬೇಕಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.

ಶ್ರಮಿಕ ವರ್ಗದ ಬಗೆಗಿನ ನಿಮ್ಮ ಹೇಳಿಕೆಗಳು ಅವರ ವೃತ್ತಿ ಧರ್ಮಕ್ಕೆ ಅವಮಾನ

ಕಸ ಗುಡಿಸುವವರ, ಬಂಡೆ ಒಡೆಯುವ ಶ್ರಮಿಕ ವರ್ಗದ ಬಗೆಗಿನ ನಿಮ್ಮ ಹೇಳಿಕೆಗಳು ಅವರ ವೃತ್ತಿ ಧರ್ಮಕ್ಕೆ ಅವಮಾನ ಮಾಡುವಂತದ್ದು. ಪೂಜ್ಯ ಬಸವಣ್ಣನವರ `ಕಾಯಕವೇ ಕೈಲಾಸ’ ತತ್ವದ ಬಗ್ಗೆ ನಿಮಗೆ ನಂಬಿಕೆ ಇಲ್ಲ ಎಂಬುದನ್ನು ಶ್ರುತಪಡಿಸುತ್ತದೆ. ಶ್ರಮಿಕ ವರ್ಗ ಗೌರವಯುತವಾಗಿ ಬದುಕುವ ಮನುಷ್ಯರು ಎಂದು ಅರ್ಥ ಮಾಡಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

key words : house-hundred-door-congress-Secure-your-position-Siddaramaiah-C.T.Ravi