ಬೆಂಗಳೂರು, ಫೆಬ್ರವರಿ,16,2024(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ಇಂದು ಮಂಡನೆಯಾಗಿದ್ದು ಎಲ್ಲಾ ಕ್ಷೇತ್ರಗಳಿಗೂ ಸಿಎಂ ಸಿದ್ದರಾಮಯ್ಯ ಆದ್ಯತೆ ನೀಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಒಟ್ಟು 3 ಗಂಟೆ 14 ನಿಮಿಷಗಳ ಕಾಲ ಬಜೆಟ್ ಮಂಡನೆ ಮಾಡಿದರು. ಕಳೆದ ಬಾರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3,71,383 ಕೋಟಿ ಗಾತ್ರದ ಬಜೆಟ್ ಮಂಡನೆಯಾಗಿದೆ. ಈ ಮೂಲಕ ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ.
ಸುದೀರ್ಘ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಅಭಿನಂದನೆ ಸಲ್ಲಿಸಿದರು. ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್ ಅವರು ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 10.15ಕ್ಕೆ ಮುಂದೂಡಿದರು.
Key words: how much time -CM Siddaramaiah -took – present -budget