ಬೆಂಗಳೂರು ಸೆಪ್ಟಂಬರ್,16,2023(www.justkannada.in): ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಾಗಿದೆ. ಈ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ಡೆಡ್ ಲೈನ್ ನೀಡಿದೆ.
ಹಳೆಯ ವಾಹನಗಳಿಗೆ ಪ್ಲೇಟ್ ಅಳವಡಿಕೆ ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.
ಇನ್ನು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರಿಗೆ ಸಾರಿಗೆ ಇಲಾಖೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
Key words: HSRP- number plate – mandatory-Department -Transport – dead line.