ಹುಬ್ಬಳ್ಳಿ,ಡಿಸೆಂಬರ್,27,2024 (www.justkannada.in): ಭಾನುವಾರ ರಾತ್ರಿ ಹಳೇ ಹುಬ್ಬಳ್ಳಿಯ ಸಾಯಿನಗರ ಈಶ್ವರ ದೇವಸ್ಥಾನ ಬಳಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಇದೀಗ ಸಾವನ್ನಪ್ಪಿದ ಅಯ್ಯಪ್ಪ ಮಾಲಾಧಾರಿಗಳ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಸಿಲಿಂಡರ್ ಸ್ಫೋಟಗೊಂಡ ದುರಂತದಲ್ಲಿ ಮತ್ತೋರ್ವ ಗಾಯಾಳು ಅಯ್ಯಪ್ಪ ಮಾಲಾಧಾರಿ ಲಿಂಗರಾಜು (19) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ಹಳೇ ಹುಬ್ಬಳ್ಳಿಯ ಸಾಯಿನಗರ ಈಶ್ವರ ದೇವಸ್ಥಾನ ಬಳಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದರು. ಇಂದು ಬೆಳಿಗ್ಗೆ ಓರ್ವ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ.
ಈ ಬೆನ್ನಲ್ಲೇ ಇದೀಗ 19 ವರ್ಷದ ಲಿಂಗರಾಜು ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ ಸಿಲಿಂಡರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
Key words: Hubli, Cylinder explosion, case, Another Death