ಮೈಸೂರು,ಆಗಸ್ಟ್,13,2021(www.justkannada.in): ನಾಳೆ ಮೈಸೂರಿನಲ್ಲಿ ಬೃಹತ್ ಲೋಕ್ ಅದಾಲತ್ ಆಯೋಜನೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಇದರಲ್ಲಿ ಭಾಗವಹಿಸುವ ಭಾಗವಹಿಸುವ ನ್ಯಾಯವಾದಿ (ವಕೀಲರು), ದಾವೆದಾರರು, ನ್ಯಾಯಾಲಯ ಸಿಬ್ಬಂದಿಗಳು ಸಂಚರಿಸಲು ಅನುಮತಿ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೇರಳ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು ಅಂತೆಯೇ ಮೈಸೂರಿನಲ್ಲೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಈ ನಡುವೆ ನಾಳೆ ನಡೆಯುವ ಬೃಹತ್ ಲೋಕ್ ಅದಾಲತ್ ನಲ್ಲಿ ಭಾಗವಹಿಸುವ ನ್ಯಾಯವಾದಿ (ವಕೀಲರು), ದಾವದಾರರು, ನ್ಯಾಯಾಲಯ ಸಿಬ್ಬಂದಿಗಳು ಸಂಚರಿಸಲು ಅನುಮತಿ ನೀಡುವಂತೆ ಜಿಲ್ಲಾಡಳಿತಕ್ಕೆ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಷರತ್ತುಗಳನ್ನ ವಿಧಿಸಿ ಲೋಕ್ ಅದಾಲತ್ ನಲ್ಲಿ ಭಾಗವಹಿಸುವವರು ಸಂಚರಿಸಲು ಮೈಸೂರು ಜಿಲ್ಲಾಡಳಿತ ಅನುಮತಿ ನೀಡಿದೆ. ಷರತ್ತುಗಳು ಈ ಕೆಳಕಂಡಂತಿವೆ.
1.ಸಭೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.
2 ಸಭೆಯಲ್ಲಿ ಪಾಲ್ಗೊಂಡವರ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ದಾಖಲಿಸುವುದು.
- ಸಭೆಗೆ ಆಗಮಿಸುವ ಪ್ರತಿಯೊಬ್ಬರನ್ನು ಪ್ರವೇಶ ದ್ವಾರದಲ್ಲಿ ಧರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸುವುದು ಕಡ್ಡಾಯವಾಗಿರುತ್ತದೆ.
- ಜ್ವರ, ಶೀತ, ಕೆಮ್ಮು ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರು ಸಮಾರಭದಲ್ಲಿ ಪಾಲ್ಗೊಳ್ಳುವಂತಿಲ್ಲ ಮತ್ತು ಅಂತಹ ಯಾವುದೇ ಲಕ್ಷಣಗಳಿರುವವರು ಕಂಡುಬಂದಲ್ಲಿ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಅಥವಾ ಜಿಲ್ಲಾ ಕಂಟ್ರೋಲ್ ಟೋಲ್ ಫ್ರೀ ಸಂಖ್ಯೆ 1077 ಗೆ ಮಾಹಿತಿ ನೀಡುವುದು.
- ಸಭೆಯಲ್ಲಿ ಭಾಗವಹಿಸುವ ಎಲ್ಲಾ ವ್ಯಕ್ತಿಗಳು ದೈಹಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು.
- ಕ್ಷ್ಯಗಳನ್ನು ಸ್ವಚ್ಛಗೊಳಿಸಲು ಅನುಕೂಲವಾಗುವಂತೆ ಹ್ಯಾಂಡ್ ವಾಶ್, ಟಿಶ್ಯು ಪೇವರ್, ಸಾಬೂನೂ ಹಾಗೂ ನೀರಿನ ವ್ಯವಸ್ಥೆ ಕಲ್ಪಿಸುವುದು.
- ಸ್ವಚ್ಛತ ಹಾಗೂ ನೈರ್ಮಲ್ಯತೆಯನ್ನು ಕಾಪಾಡಲು ಅವಶ್ಯಕವಿರುವ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳತಕ್ಕದ್ದು.
Key words: Huge Lok Adalat – Mysore- tomorrow-participants – travel- Permission