ಮೈಸೂರು,ನ,29,2019(www.justkannada.in): ಡಿಸೆಂಬರ್ 5ರಂದು 15 ಕ್ಷೇತ್ರಗಳ ಉಪ ಚುನಾವಣೆಗೆ ರಾಜ್ಯದಲ್ಲಿ ಮೂರು ಪಕ್ಷಗಳು ಸಜ್ಜಾಗಿದ್ದು ಈ ನಡುವೆ ಹುಣಸೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಮತದಾನಕ್ಕೆ ಮುನ್ನ 48 ಗಂಟೆಗಳ ಕಾಲ ಮದ್ಯಪಾನ ನಿಷೇಧಕ್ಕೆ ಚುನಾವಣಾ ಆಯೋಗ ನಿರ್ದೇಶನ ನೀಡಿರುವ ಹಿನ್ನೆಲೆ ಡಿಸೆಂಬರ್ 3ರ ಸಂಜೆ 6ರಿಂದ ಡಿಸೆಂಬರ್ 5ರ ಮಧ್ಯರಾತ್ರಿ 12ರವರೆಗೆ ಹುಣಸೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಹಾಗೆಯೇ ಡಿಸೆಂಬರ್ 9ರಂದು ಉಪ ಚುನಾವಣೆಯ ಮತಗಳ ಎಣಿಕೆ ಹಿನ್ನೆಲೆ. ಡಿಸೆಂಬರ್ 8ರ ಮಧ್ಯರಾತ್ರಿ 12ರಿಂದ ಡಿಸೆಂಬರ್ 9ರ ಮಧ್ಯರಾತ್ರಿ 12ಗಂಟೆವರೆಗೆ ಮದ್ಯ ಮಾರಾಟ ನಿಷೇಧ ವಿಧಿಸಿ ಚುನಾಚಣಾ ಆಯೋಗದ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆ ಸೂಚಿಸಿರುವ ದಿನಗಳಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಮದ್ಯ ಮಾರಾಟ ಮಾಡುವ ಹಾಗಿಲ್ಲ. ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
Key words: hunsur-by-election-ban-sale – liquor