ಮೈಸೂರು,ನವೆಂಬರ್,25,2020(www.justkannada.in): ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ವಾಯುಭಾರ ಕುಸಿತದಿಂದಾಗಿ ನಿವಾರ್ ಸೈಕ್ಲೋನ್ ಉಂಟಾಗಿದ್ದು, ಸೈಕ್ಲೋನ್ ನಿವಾರ್ ತಮಿಳುನಾಡು ಕರಾವಳಿ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.
ಈ ಮಧ್ಯೆ ಬೆಂಗಳೂರಿಗೂ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಹೀಗಾಗಿ ರೆಡ್ ಅಲರ್ಟ್ ಘೋಷಣೆಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ನಿವಾರ್ ಚಂಡಮಾರುತ ಅಪ್ಪಳಿಸುವ ಕುರಿತು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಎಸ್ ವೈ, ನಾನು ನೀನು ಚಂಡ ಮಾರುತ ತಡೆಯೋಕೆ ಆಗುತ್ತೇನ್ರಿ ಎಂದು ಪ್ರಶ್ನಿಸಿದರು. ಅಲ್ಲದೆ ಇದಕ್ಕಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ರೆಡ್ ಅಲರ್ಟ್ ಘೋಷಣೆ ಮಾಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಇನ್ನೂ 25 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡುತ್ತೇವೆ. ಇಂದು ಸಂಜೆಯ ವೇಳೆಗೆ ಆದೇಶ ಹೊರಡಿಸಲಾಗುತ್ತದೆ. ಯಾರ್ಯಾರಿಗೆ ಕೈ ತಪ್ಪಿದೆಯೋ ಅವರಿಗೆ ಮುಂದೆ ಅವಕಾಶ ನೀಡ್ತೇವೆ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರ ಇನ್ನೆರಡು ಮೂರು ದಿನಗಳಲ್ಲಿ ಫೈನಲ್ ಆಗಲಿದೆ ಎಂದರು.
Key words: Hurricane- Nivar-bangalore-Red Alert –Declaration-CM BS Yeddyurappa-mysore