ಮೈಸೂರು,ನವೆಂಬರ್,11,2023(www.justkannada.in): ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನ ನೇಮಕ ಮಾಡಲಾಗಿದ್ದು ಈ ಬೆನ್ನಲ್ಲೆ ಇದೀಗ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ ಎಂದು ಶಾಸಕ ಡಾ ಅಶ್ವತ್ ನಾರಾಯಣ್ ಇಂಗಿತ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಶಾಸಕ ಡಾ ಅಶ್ವತ್ ನಾರಾಯಣ್ , ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಆಗಿದೆ. ಸೂಕ್ತವಾದ ವ್ಯಕ್ತಿಯನ್ನು ವಿರೋಧ ಪಕ್ಷದ ನಾಯಕರನ್ನಾಗಿ ನಮ್ಮ ನಾಯಕರು ನೇಮಕ ಮಾಡುತ್ತಾರೆ. ವಿಧಾನಸಭೆಯಲ್ಲಿ ನಮ್ಮ 66 ಜನ ಶಾಸಕರಿದ್ದಾರೆ. ಎಲ್ಲರೂ ವಿರೋಧ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ. ನಾನೂ ಕೂಡ ಆಕಾಂಕ್ಷಿಯಾಗಿದ್ದೇನೆ ವಿಧಾನಸಭೆಯಲ್ಲಿ ಬಿಜೆಪಿ ಕಾನೂನಾತ್ಮಕವಾಗಿ ವಿರೋಧ ಪಕ್ಷ. ನಮ್ಮಲ್ಲೇ ಬೇಕಾದಷ್ಟು ನಾಯಕರಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಆಗಿರಬಹುದು. ಅಂದ ಮಾತ್ರಕ್ಕೆ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಕೊಡಬೇಕು ಅಂತಾ ಏನೂ ಇಲ್ಲ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಹೃದಯ ತುಂಬಿ ಸ್ವಾಗತ ಮಾಡುತ್ತೇನೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ವಿಚಾರ ಕುರಿತು ಪ್ರತಿಕ್ರಿಯಿಸಿದ ಅಶ್ವಥ್ ನಾರಾಯಣ್, ನಾನು ಹೃದಯ ತುಂಬಿ ಸ್ವಾಗತ ಮಾಡುತ್ತೇನೆ. ವಿಜಯೇಂದ್ರ ಯುವಕ ಇದ್ದಾರೆ. ಪಕ್ಷವನ್ನು ಸಮರ್ಥವಾಗಿ ಕಟ್ಟುತ್ತಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದರು. ಅದರಲ್ಲಿ ಹಿರಿಯರೂ ಇದ್ದರು. ಆದರೆ ಕಿರಿಯರಿಗೆ ಕೊಡಬಾರದು ಅಂತೇನಿಲ್ಲ. ವಿ.ಸೋಮಣ್ಣ ಪ್ರಭಾವಿ ನಾಯಕರು. ಅವರಿಗೆ ಎಲ್ಲಾ ರೀತಿಯ ಅರ್ಹತೆ ಇತ್ತು. ಸಿ.ಟಿ.ರವಿ ಅವರಿಗೂ ಪಕ್ಷ ಅನೇಕ ಹುದ್ದೆಗಳನ್ನ ನೀಡಿದೆ. ಒಂದೇ ಹುದ್ದೆ ಎಲ್ಲರಿಗೂ ಕೊಡಲಿಕ್ಕೆ ಆಗಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿ ಇರಬೇಕಾಗುತ್ತದೆ ಎಂದರು.
ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಪಥನ ಆಗುತ್ತೆ ಅನ್ನೋ ವಿಚಾರ ಕುರಿತು ಪ್ರತಿಕ್ರಿಯಿಸಿದ ಅಶ್ವಥ್ ನಾರಾಯಣ್, ನಾವೇನು ಮಾಡಲ್ಲ. ಅವರ ಪಕ್ಷದವರಿಂದಲೇ ಸರ್ಕಾರ ಬೀಳಲಿದೆ. ಸಿಎಂ ಸಿದ್ದರಾಮಯ್ಯಗೆ ತಾಯಿ ಚಾಮುಂಡಿ ಶಕ್ತಿ ನೀಡಲಿ. ಆಡಳಿತ ನಡೆಸಿಕೊಂಡು ಹೋಗಲು ತಾಯಿ ದಾರಿ ತೋರಿಸಲಿ. ಅವರ ಪಕ್ಷದಲ್ಲೇ ಸಾಕಷ್ಟು ಒಡಕುಗಳಿವೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳ ದಂಡೇ ಇದೆ. ನಾನು ಸಿಎಂ ಆಗ್ತೀನಿ ಅಂತ ಎಲ್ಲರೂ ಹೇಳ್ತಾರೆ. ಅವರ ಪಕ್ಷದಲ್ಲಿ ಅಸಮಾಧಾನಿತರು ಇದ್ದಾರೆ. ಸಿಎಂ ಸಿದ್ದರಾಮಯ್ಯರನ್ನ ಎಲ್ಲರು ಸೇರಿ ಉಡೀಸ್ ಮಾಡ್ತಿದ್ದಾರೆ. ಅವರೇ ಆಯ್ಕೆ ಮಾಡಿಕೊಂಡ ಮಂತ್ರಿಗಳು ಅವರ ಮಾತನ್ನೇ ಕೇಳುತ್ತಿಲ್ಲ. ಅಂತವರನ್ನ ಸಚಿವ ಸಂಪುಟದಿಂದ ಆಚೆ ಹಾಕಿದರೆ ಒಳಿತು ಎಂದು ಸಿಎಂ ಸಿದ್ದರಾಮಯ್ಯರಿಗೆ ಸಲಹೆ ನೀಡಿದರು.
Key words: I am – aspiring – opposition leader -MLA Dr Ashwat Narayan