ಚಿತ್ರದುರ್ಗ, ಅಕ್ಟೋಬರ್ ,9,2023(www.justkannada.in): ಈ ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂ.ಪಿ ರೇಣುಕಾಚಾರ್ಯ, ಬೇರೆಯವರನ್ನು ಟೀಕೆ ಮಾಡಲು ನಮಗೆ ಯಾವ ನೈತಿಕತೆ ಇದೆ. ಮೊದಲು ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರ ಆಯ್ಕೆ ಮಾಡಲಿ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ನೋವಿನಿಂದ ಮಾತನಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಎಂ.ಪಿ ರೇಣುಕಾಚಾರ್ಯ, ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನಮ್ಮದೇ ಪಕ್ಷದ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಸೋಲಿಗೆ ನಾಯಕರ ದೌರ್ಬಲ್ಯ ಕಾರಣ. ಬಿಜೆಪಿ ಕಾರ್ಯಕರ್ತರನ್ನೇ ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತು ಮಾತನಾಡಿದ ಎಂ.ಪಿ ರೇಣುನಾಚಾರ್ಯ, ಜೆಡಿಎಸ್, ಬಿಜೆಪಿ ಮೈತ್ರಿಗೆ ವಿರೋಧ ಮಾಡಲ್ಲ. ಈ ಹಿಂದೆ ಜೆಡಿಎಸ್ನವರು ವಚನ ಭ್ರಷ್ಟರು ಎಂದು ನಾವೇ ಹೇಳಿದ್ದೆವು. ಅಂತಹವರ ಜೊತೆ ಯಾವ ರೀತಿ ಮೈತ್ರಿ ಎಂದು ಜನ ಕೇಳುತ್ತಿದ್ದಾರೆ. ರಾಜ್ಯ ನಾಯಕರನ್ನು ಹೊರಗಿಟ್ಟು ಮೈತ್ರಿಯಾದ್ರೆ ಅಪೂರ್ಣ ಆಗುತ್ತದೆ. ಯಡಿಯೂರಪ್ಪ ಸೇರಿ ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
Key words: I am –Davangere- Lok Sabha- constituency- ticket -aspirant- MP Renukacharya.