ಬೆಂಗಳೂರು,ಮೇ,19,2023(www.justkannada.in): ನಾಳೆ ಸಿಎಂ ಮತ್ತು ಡಿಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು ಸಚಿವರಾಗಿ ಕೆಲ ಶಾಸಕರು ಸಹ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಾಳಯದಲ್ಲಿ ಲಾಬಿ ಜೋರಾಗಿದ್ದು ಹಲವು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಈ ನಡುವೆ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಅವರಿಗೆ ಸ್ಪೀಕರ್ ಸ್ಥಾನ ಸಿಗುತ್ತದೆಯೇ ಎಂಬ ಕುತೂಹಲ ಮೂಡಿದೆ. ಇನ್ನು ಈ ಬಗ್ಗೆ ಸ್ವತಃ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದು, ಸ್ಪೀಕರ್ ಸ್ಥಾನ ಬಹಳ ಜವಾಬ್ದಾರಿಯುತ ಸ್ಥಾನವಾಗಿದೆ. ಸ್ಪೀಕರ್ ಸ್ಥಾನಕ್ಕೆ ನಾನು ಅರ್ಹನಲ್ಲ ಎನ್ನುವ ಮೂಲಕ ನೇರವಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.
ನಾನು 8 ಸಿಎಂಗಳ ಜೊತೆ ಕೆಲಸ ಮಾಡಿದ್ದೇನೆ. ಸಚಿವ ಸ್ಥಾನದ ನಿರ್ಣಯ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಆರ್.ವಿ ದೇಶಪಾಂಡೆ ತಿಳಿಸಿದ್ದಾರೆ.
Key words: I am –not- eligible – post –Speaker-Senior MLA -RV Deshpande.