ಬೆಂಗಳೂರು,ಆಗಸ್ಟ್,16,2023(www.justkannada.in): ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಬರಬಹುದು ಎಂಬ ಚರ್ಚೆ ಹುಟ್ಟಿಕೊಂಡಿದ್ದು ಈ ಕುರಿತು ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಶಾಸಕ ಮುನಿರತ್ನ, ನನಗೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಭಾರತೀಯ ಜನತಾ ಪಾರ್ಟಿಯಲ್ಲೇ ಇರುತ್ತೇನೆ ರಾಜಕೀಯ ಬೇಡ ಎನಿಸಿದರೇ ನಿವೃತ್ತಿಯಾಗುತ್ತೇನೆ. ನಾನು ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟಲ್ಲ ಎಂದು ಸ್ಪಷ್ಟನೆ ನೀಡಿದರು.
ನನ್ನನ್ನ ಮುನಿರತ್ನ ಭೇಟಿಯಾಗಿದ್ದರು ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಮುನಿರತ್ನ, ಡಿಕೆ ಶಿವಕುಮಾರ್ ಬೆಂಗಳೂರಿನ ಉಸ್ತುವಾರಿ ಸಚಿವರು. ಡಿಕೆ ಶಿವಕುಮಾರ್ ಗೆ ಎಲ್ಲಾ ಕ್ಷೇತ್ರಗಳಿಗೆ ಹೋಗುವ ಹಕ್ಕಿದೆ. ಭೇಟಿಯಾಗಿದ್ದನ್ನು ರಾಜಕೀಯವಾಗಿ ಬಳಸಿದ್ದು ತಪ್ಪು. ಡಿಕೆ ಶಿವಕುಮಾರ್, ಅಭಿವೃದ್ಧಿ ಬಗ್ಗೆ ಮಾತನಾಡಲಿ ರಾಜಕೀಯವಾಗಿ ನೋಡೋದನ್ನ ಬಿಡಲಿ ಎಂದು ಟಾಂಗ್ ನೀಡಿದರು.
Key words: I don’t -need -Congress party- MLA Muniratna