ಮುಂಬೈ,ಜೂನ್,27,2023(www.justkannada.in): ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟಗೊಂಡಿದ್ದು, ಅಕ್ಟೋಬರ್ 5 ರಂದು ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದೆ. ಹಾಗೆಯೇ ಭಾರತ ಮತ್ತು ಪಾಕಿಸ್ತಾನ ಅಕ್ಟೋಬರ್ 15 ರಂದು ಸೆಣಸಾಡಲಿವೆ.
ಐಸಿಸಿ ಮತ್ತು ಬಿಸಿಸಿಐ ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದೆ.
ನವೆಂಬರ್ 15 ರಂದು ಮುಂಬೈನಲ್ಲಿ ಮೊದಲ ಸೆಮಿಫೈನಲ್ ಪಂದ್ಯ, ಮತ್ತು ಕೋಲ್ಕತ್ತಾದಲ್ಲಿ ನವೆಂಬರ್16 ರಂದು 2ನೇ ಸೆಮಿಫೈನಲ್ ಪಂದ್ಯ ಆಯೋಜಿಸಲಾಗಿದ್ದು, ಅಂತಿಮ ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್ನಲ್ಲಿ ನಡೆಯಲಿದೆ.
ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂಬತ್ತು ಪಂದ್ಯಗಳನ್ನ ಆಡಲಿದೆ. ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಕ್ವಾಲಿಫೈಯರ್ 1, ಕ್ವಾಲಿಫೈಯರ್ 2 ವಿರುದ್ಧ ಸೆಣೆಸಾಟ ನಡೆಯಲಿದೆ.
ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ ಹೀಗಿದೆ…
ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
ಭಾರತ vs ಅಫ್ಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
ಭಾರತ vs ಪಾಕಿಸ್ತಾನ- 15 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ
ಭಾರತ vs ನ್ಯೂಜಿಲೆಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ
ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ
ಭಾರತ vs ಕ್ವಾಲಿಫೈಯರ್ 2- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ
ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ
ಭಾರತ vs ಕ್ವಾಲಿಫೈಯರ್ 1- 11 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.
Key words: ICC- ODI -World Cup 2023 –schedule- announced-India-Pak -match