ಬೆಂಗಳೂರು, ಆಗಸ್ಟ್ 18, 2021 (www.justkannada.in): ಐಸಿಸಿ ಟೆಸ್ಟ್ ಚಾಂಪಿಯನ್’ಶಿಪ್ ಹೊಸ ನಿಯಮದ ಪ್ರಕಾರ ಆಡಿದ ಪಂದ್ಯಗಳಲ್ಲಿ ಗೆದ್ದ ಪಂದ್ಯಗಳಿಗೆ ಅನುಸಾರವಾಗಿ ಶೇಕಡಾವಾರಿನಂತೆ ತಂಡಗಳು ಪಡೆದುಕೊಳ್ಳಲಿವೆ.
ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಡ್ರಾ ಸಾಧಿಸುವ ಮೂಲಕ ಭಾರತ ಖಾತೆ ತೆರೆದಿತ್ತು. ಇದೀಗ ಲಾರ್ಡ್ಸ್ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡ ಮಣಿಸುವ ಮೂಲಕ 12 ಅಂಕಗಳನ್ನು ಪಡೆದುಕೊಂಡಿದೆ.
ಈ ಮೂಲಕ ಪಾಯಿಂಟ್ ಟೇಬಲ್ನಲ್ಲಿ ಒಟ್ಟು 14 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿದೆ.
ಪಾಕಿಸ್ತಾನ್ ವಿರುದ್ದದ ಮೊದಲ ಟೆಸ್ಟ್ ಪಂದ್ಯ ಗೆದ್ದಿರುವ ವೆಸ್ಟ್ ಇಂಡೀಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತ ಎರಡು ಪಂದ್ಯಗಳಿಂದ ಒಟ್ಟು 14 ಅಂಕ ಪಡೆದರೂ ಗೆಲುವಿನ ಶೇಕಡಾವಾರು (58.33%) ಲೆಕ್ಕಚಾರದಲ್ಲಿ ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟಿದೆ.