ಬೆಂಗಳೂರು,ಜೂ,5,2019(www.justkannada.in): ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ. ರಾಜ್ಯದ ಎಲ್ಲಾ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದ್ದರೂ ಒಬ್ಬ ದಲಿತ ಸಂಸದನಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಿಲ್ಲ ಇದಕ್ಕಿಂತ ಅನ್ಯಾಯ ಬೇರೇನಿದೆ ಎಂದು ಟ್ವಿಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ದಲಿತರ ಮೇಲೆ ತಮಗೆ ನಿಜಕ್ಕೂ ಕಾಳಜಿ ಇದ್ದರೆ ಸೋತಿರುವ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಮಾಡಿ ತೋರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ರಾಜ್ಯ ಬಿಜೆಪಿ ಸವಾಲ್ ಹಾಕಿದೆ.
ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮೀಸಲು ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ? ಅಂತ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದರು.
ಇದಕ್ಕೆ ಟಾಂಗ್ ಕೊಟ್ಟಿರುವ ರಾಜ್ಯ ಬಿಜೆಪಿ ಘಟಕ, ಮಾನ್ಯ ಟ್ವಿಟರ್ ರಾಮಯ್ಯನವರೇ, ದಲಿತರ ಮೇಲಿರುವ ನಿಮ್ಮ ಪ್ರೀತಿಯನ್ನು ಬರೀ ಟ್ವಿಟರ್ ಮೂಲಕ ತೋರಿಸಬೇಡಿ. ಜಿ.ಪರಮೇಶ್ವರ್ ಅವರು ದಲಿತರು ಎಂಬ ಕಾರಣಕ್ಕೆ ಸಿಎಂ ಸ್ಥಾನ ತಪ್ಪಿಸಿದ್ದು ತಾವೇ ಎಂದು ರಾಜ್ಯದ ಜನತೆಗೆ ಗೊತ್ತಿದೆ. ದಲಿತರ ಮೇಲೆ ತಮಗೆ ನಿಜಕ್ಕೂ ಕಾಳಜಿ ಇದ್ದರೆ ಸೋತಿರುವ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಮಾಡಿ ತೋರಿಸಿ ಎಂದು ಸವಾಲು ಹಾಕಿದೆ.
Key words: If you care about Dalits, Select Mallikarjun Kharge as CM- BJP challenge to former CM Siddaramaiah
#MallikarjunKharge #CM #BJP #challenge #Siddaramaiah