ಮೈಸೂರು,ಜ,7,2020(www.justkannada.in): ಗೆಜೆಟೆಡ್ ಪ್ರೊಬೆಷನರಿ 2015ರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ಕೆ.ಎ.ಎಸ್ ಹುದ್ದೆಗಳ ನೇಮಕದಲ್ಲಿ ಆಕ್ರಮ ನಡೆದಿದ್ದು ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹಿಸಿದೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಸುದ್ದಿಗೋಷ್ಠಿ ನಡೆಸಿ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು, ಕೆಪಿಎಸ್ಸಿ ಮುಖ್ಯ ಪರೀಕ್ಷೆ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ. ಒಂದೆರಡು ಸಮುದಾಯಗಳಿಗೆ 150 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅರ್ಹ ಹಾಗೂ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಶೋಷಿತ ವರ್ಗಗಳಿಗೆ ಮೀಸಲಾತಿಯಷ್ಟೇ ಹುದ್ದೆಗಳಿಗೆ ಮಾತ್ರ ಆಯ್ಕೆಯಾಗಿರುವುದು ಸಂಶಯ ಹುಟ್ಟುಹಾಕಿದ್ದು, ಕೂಡಲೇ ಸರ್ಕಾರ ಮೌಲ್ಯಮಾಪನದಲ್ಲಿ ನಡೆದಿರುವ ಬಗ್ಗೆ ತನಿಖೆ ನಡೆಸಬೇಕು. ಮರುಮೌಲ್ಯಮಾಪನ ಮಾಡಿ ಶೋಷಿತವರ್ಗದ ಪ್ರತಿಭಾವಂತರಿಗೆ ನ್ಯಾಯಕೊಡಿಸಬೇಕು ಎಂದು ಕೆ.ಎಸ್.ಶಿವರಾಮು ಒತ್ತಾಯಿಸಿದ್ದಾರೆ.
Key words: Illegal – Gazetted Probationary 2015 –selection list- Forces -Judicial Inquiry-mysore