ಬೆಂಗಳೂರು,ಆಗಸ್ಟ್,2,2022(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೌದು ಡಿಕೆ ಶಿವಕುಮಾರ್ ಅವರ ಜಾಮೀನು ವಿಸ್ತರಿಸಿ ಜಾರಿ ನಿರ್ದೇಶನಾಲಯ ವಿಶೇಷ ಕೋರ್ಟ್ ಆದೇಶಿಸಿದೆ. ಅಲ್ಲದೆ ಇತರೆ ಆರೋಪಿಗಳಿಗೂ ಜಾಮೀನು ನೀಡಿ ಇಡಿ ವಿಶೇಷ ಕೋರ್ಟ್ ಜಡ್ಜ್ ವಿಕಾಶ್ ಧುಲ್ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ್, ಸುನೀಲ್ ಶರ್ಮಾ, ರಾಜೇಂದ್ರ ಅವರಿಗೆ ಮೂರು ಷರತ್ತುಗಳನ್ನ ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ತನಿಖೆ ನಡೆಸಿದ್ದ ಇಡಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿತ್ತು. ಈ ಹಿನ್ನಲೆ ಡಿ.ಕೆ ಶಿವಕುಮಾರ್ ತಮ್ಮ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿಗಣಿಸಲು ಮನವಿ ಮಾಡಿದ್ದರು. ಅದೇ ವೇಳೆ ಪ್ರಕರಣದ ಇತರೆ ಆರೋಪಿಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು.
Key words: Illegal -money –transfer- case-Big relief – DK Shivakumar: