ನವದೆಹಲಿ,ಡಿ,12,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ವಿಚಾರಣೆಗೆ ಕೋರಿ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿಯನ್ನ ವಾಪಸ್ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ರದ್ದು ಮಾಡಿ ಮತ್ತು ಬೆಂಗಳೂರಿನಲ್ಲಿ ವಿಚಾರಣೆಗೆ ವಿನಾಯಿತಿ ನೀಡುವಂತೆ ಕೋರಿ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ಮತ್ತು ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ನವದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ ವಿಚಾರಣೆ ನಡೆಸುವುದಾಗಿ ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ನಮವದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಡಿ.ಕೆ ಶಿವಕುಮಾರ್ ಪತ್ನಿ ಉಷಾ ಅವರ ಅರ್ಜಿ ವಿಚಾರಣೆ ಮುಂದುವರೆದಿದ್ದು, ಗೌರಮ್ಮ ಅವರನ್ನ ಬಿಟ್ಟು ಇತರರಿಗೆ ಬೆಂಗಳೂರಿನಲ್ಲಿ ವಿಚಾರಣೆ ನಡೆಸಲು ವಿನಾಯಿತಿ ನೀಡಲು ಇಡಿ ನಿರಾಕರಿಸಿದೆ. ಹೀಗಾಗಿ ಅರ್ಜಿ ವಿಚಾರಣೆಯನ್ನ ನವದೆಹಲಿ ಹೈಕೋರ್ಟ್ ಮುಂದೂಡಿದೆ.
Key words: Illegal Money- Transfer Case-former minister- DK Sivakumar- mother – Gauramma-petition –back-Delhi High Court.