ನವದೆಹಲಿ, ಮಾರ್ಚ್ 5,2024(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
Key words: Illegal -money transfer- case-Supreme Court – big relief – DCM -DK Shivakumar.