ವೋಟರ್ ಐಡಿ ಪರಿಷ್ಕರಣೆ ಅಕ್ರಮ ಆರೋಪ: ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ದೂರು.

ಬೆಂಗಳೂರು,ನವೆಂಬರ್,19,2022(www.justkannada.in): ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿರುವ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ದೂರು ಸಲ್ಲಿಸಿದೆ.

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಕುರಿತು ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿತು.

ಈ ವೇಳೆ ಕಾಂಗ್ರೆಸ್ ನಾಯಕರಾದ ಎಂ.ಬಿ ಪಾಟೀಲ್, ಕೃಷ್ಣಭೈರೇಗೌಡ, ರಾಮಲಿಂಗರೆಡ್ಡಿ, ದಿನೇಶ್ ಗುಂಡೂರಾವ್. ರಿಜ್ವಾನ್ ಅರ್ಷಾದ್,  ಶಾಸಕ ಸೌಮ್ಯರೆಡ್ಡಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

Key words: illegal- revision – voter ID-Congress- complaint – State Election Commission.

ENGLISH SUMMARY…

Fake voter ID case: Congress delegation registers complaint with EC
Bengaluru, November 19, 2022 (www.justkannada.in): The Congress delegation today registered a complaint with the State Election Commission alleging illegalities in the Voter ID revision process.
The delegation led by KPCC President D.K. Shivakumar and leader of the opposition in the assembly Siddaramaiah went to the office of the State Election Commission located at the Sheshadri Road in Bengaluru today and lodged the complaint.
Congress leaders M.B.Patil, Krishna Byregowda, Ramalingareddy, Dinesh Gundurao, Rizwan Arshad, MLA Somwya Reddy and others were present.
Keywords: KPCC/ BJP/ fake voter ID list/ complaint/ State Election Commission