ಬೆಂಗಳೂರು,ಜೂ,28,2019(www.justkannada.in): ಹೂಡಿಕೆದಾರರಿಗೆ ಐಎಂಎ ಕಂಪನಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮಾಲೀಕ ಮನ್ಸೂರ್ ಖಾನ್ ನ ಆಸ್ತಿಯನ್ನ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೂಡಿಕೆದಾರರಿಗೆ ವಂಚನೆ ಮಾಡಿ ತಲೆಮರಿಸಿಕೊಂಡಿರುವ ಆರೋಪಿ ಮನ್ಸೂರ್ ಖಾನ್ ಗೆ ಸೇರಿದ 210 ಕೋಟಿ ರೂ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಮನ್ಸೂರ್ ಖಾನ್ 20 ಚರಾಸ್ತಿಗಳು 12 ಕೋಟಿ ಠೇವಣಿಯನ್ನ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಇನ್ನು ಮನ್ಸೂರ್ ಖಾನ್ ಬಳಿ 130 ಬ್ಯಾಂಕ್ ಖಾತೆಗಳಿರುವುದು ಪತ್ತೆಯಾಗಿದೆ.
ಐಎಂಎ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದ 35 ಸಾವಿರಕ್ಕೂ ಹೆಚ್ಚು ಮಂದಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುತ್ತಿದೆ. ಮನ್ಸೂರ್ ಖಾನ್ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
Key words: IMA -Company –Fraud- Case-Mansur Khan’s -property – Siege