ಬೆಂಗಳೂರು,ಆಗಸ್ಟ್,5,2021(www.justkannada.in): ಕರ್ನಾಟಕ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಸಮ್ಮತಿ ನೀಡಬೇಕು ಹಾಗೂ ಶಂಕುಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಹಾಗೂ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ರಾಜಕೀಯ ಲಾಭಕ್ಕಾಗಿ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ವಿರೋಧಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬೆಂಗಳೂರಿನ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೇಕೆದಾಟು ಯೋಜನೆ ಜಾರಿಗೆ ವಿರೋಧಿಸಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನಡೆಯನ್ನು ಖಂಡಿಸಿ ಅಣ್ಣಾಮಲೈ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿರುವ ಪ್ರತಿಭಟನಾಕಾರರು, ಕಾವೇರಿ ನದಿ ನೀರಿನ ವಿಷಯದಲ್ಲಿ ಅನವಶ್ಯಕವಾಗಿ ತಮಿಳುನಾಡು ಅಪಪ್ರಚಾರವನ್ನು ಹೆಚ್ಚಿಸುತ್ತಲೇ ಇದೆ ಆದರೆ ವಾಸ್ತವಾಂಶದ ಮಾಹಿತಿ ಪಡೆಯದೆ ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಲೇ ಇದೆ ಇದು ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಅಲ್ಲಿನ ಪಕ್ಷಗಳು ನಿರಂತರವಾಗಿ ಇಂತಹ ವಿರೋಧವನ್ನ ವ್ಯಕ್ತಪಡಿಸುತ್ತಲೇ ಬಂದಿದೆ ಆದರೆ ಕೇಂದ್ರ ಸರ್ಕಾರ ಕೂಡಲೇ ಹಿಂದಿನ ಕಾಂಗ್ರೆಸ್ ಸರ್ಕಾರ ಸಿದ್ಧಪಡಿಸಿರುವ ಡಿಪಿಆರ್ ಗೆ ಮಂಜೂರಾತಿ ನೀಡಿ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೂಡಲೇ ಅನುಮತಿ ನೀಡಬೇಕೆಂದು ಆಗ್ರಹಿಸಿದರು.
ನೂತನ ಮುಖ್ಯಮಂತ್ರಿ. ಬಸವರಾಜ್ ಬೊಮ್ಮಾಯಿ ರವರು ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ ಎಂಬ ಮಾತನ್ನು ಈಗಾಗಲೇ ಹೇಳಿದ್ದಾರೆ ಕೇಂದ್ರ ಸರ್ಕಾರದ ಮೂಲಕ ಅನುಮತಿ ಪಡೆಯುತ್ತೇವೆ ಎಂದಿದ್ದಾರೆ. ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ ಆದರೆ ಕೂಡಲೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಜನಪರ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದಿಂದ ಇಪ್ಪತ್ತೈದು ಸಂಸದರು ಬಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದಾರೆ. ರಾಜ್ಯದ ಜಲ ನೆಲದ ಬಗ್ಗೆ ಹೋರಾಟ ನಡೆಸುವ ಆತ್ಮಸ್ಥೈರ್ಯವನ್ನು ಬಿಜೆಪಿ ಸಂಸದರು ಕಳೆದುಕೊಂಡಿದ್ದಾರೆ ಇವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖಂಡರಾದ ಎಸ್.ಮನೋಹರ್ ಅಧ್ಯಕ್ಷರುಗಳಾದ, ಜಿ.ಜನಾರ್ದನ್, ಎ.ಆನಂದ್ ಪಕ್ಷದ ಮುಖಂಡರಾದ .ಎಂ.ಎ. ಸಲೀಮ್, ಈ.ಶೇಖರ್. ಪುಟ್ಟರಾಜು. ಉಮೇಶ್. ಮಹೇಶ್, ಚಂದ್ರಶೇಖರ್, ಪ್ರಕಾಶ್,ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
Key words: implementation-mekedatu-plan- Congress- protests -bangalore