ಮೈಸೂರು,ಮಾರ್ಚ್,19,2024(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ. ಹೀಗಾಗಿ ನಮ್ಮ ರಾಜ್ಯದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿ ಎಂದು ಮೈಸೂರು ವಿಶ್ವ ವಿದ್ಯಾನಿಲಯ ಸಿಂಡಿಕೇಟ್ ಮಾಜಿ ಸದಸ್ಯ ಸಿ ನಿಂಗರಾಜ್ ಗೌಡ ಆಗ್ರಹಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ. ನಿಂಗರಾಜ್ ಗೌಡ, ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಷನ್ ನಲ್ಲಿ ಎಲ್ಲಾ ವರ್ಗದ ನಾಯಕರು ಇದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ರಾಜಕೀಯ ನಾಯಕರು ಇದ್ದಾರೆ. ಈಗಾಗಲೇ ದೇಶಾದ್ಯಂತ ರಾಷ್ಟೀಯ ಶಿಕ್ಷಣ ನೀತಿ ಜಾರಿಯಾಗಿದೆ. ಹಲವು ರಾಜ್ಯಗಳು ರಾಷ್ಟೀಯ ಶಿಕ್ಷಣ ನೀತಿಯನ್ನ ಜಾರಿ ಒಪ್ಪಿಕೊಂಡಿವೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ.
ನಮ್ಮ ರಾಜ್ಯದ ಮಕ್ಕಳು ಮಾತ್ರ ಇದರಿಂದ ಹಿಂದೆ ಉಳಿದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿ ಮಾಡದೇ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡೋದು ಬೇಡ. ನಮ್ಮ ರಾಜ್ಯದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿ ಎಂದು ನಿಂಗರಾಜ್ ಗೌಡ ಒತ್ತಾಯಿಸಿದರು.
Key words: Implementation – NEP-state – mysore-C. Ningraj Gowda