ಬೆಂಗಳೂರು, ನವೆಂಬರ್,18,2020(www.justkannada.in): ಮೂರು ದಿನಗಳ ಕಾಲ ನಡೆಯುವ ಪ್ರತಿಷ್ಠಿತ “ಬೆಂಗಳೂರು ತಂತ್ರಜ್ಞಾನ ಮೇಳ-2020’ (ಬಿಟಿಎಸ್) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ 19ರಂದು ಉದ್ಘಾಟಿಸಲಿದ್ದಾರೆ.
ವಿದ್ಯುನ್ಮಾನ , ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಸಾಫ್ಟವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ , ಬೆಂಗಳೂರು ವತಿಯಿಂದ ನವೆಂಬರ್ 19ರಿಂದ ನವೆಂಬರ್ 21 ರವೆಗೆ ವರ್ಚ್ಯುಯಲ್ (ಆನ್ ಲೈನ್) ಆಗಿ ’23ನೇ ಬೆಂಗಳೂರು ಟೆಕ್ ಸಮ್ಮಿಟ್’ ನಡೆಯಲಿದೆ.
ವಿಡಿಯೋ ಸಮಾವೇಶದ ಮೂಲಕ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ 10 ಗಂಟೆಗೆ 23ನೇ ಬೆಂಗಳೂರು ಟೆಕ್ ಸಮ್ಮಿಟ್’ ಉದ್ಘಾಟನೆ ಮಾಡಲಿದ್ದು, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಸ್ವಿಸ್ ಒಕ್ಕೂಟದ ಉಪಾಧ್ಯಕ್ಷ ಗೈ ಪಾರ್ಮೆಲಿನ್ ಸೇರಿದಂತೆ ಅನೇಕ ಅಂತರರಾಷ್ಟ್ರೀಯ ಗಣ್ಯರು ಭಾಗವಹಿಸಲಿದ್ದಾರೆ.
ಉದ್ಯಮಿಗಳು, ತಂತ್ರಜ್ಞರು, ಸಂಶೋಧಕರು, ನಾವೀನ್ಯಕಾರರು, ಹೂಡಿಕೆದಾರರು, ನೀತಿ ನಿರೂಪಕರು ಮತ್ತು ಭಾರತ ಮತ್ತು ಜಗತ್ತಿನ ಶಿಕ್ಷಣ ತಜ್ಞರು ಸಹ ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
Key words: inauguration – 23rd Bangalore Tech Summit -Prime Minister- Modi- tomorrow.