ಮೈಸೂರು,ಅಕ್ಟೋಬರ್,2,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಚಾಮುಂಡಿ ಬೆಟ್ಟದಲ್ಲಿ ಸಿದ್ದತ ಕಾರ್ಯಗಳು ಭರದಿಂದ ಸಾಗಿದೆ.
ನಾಳೆ ನಾಳೆ ಸಿಎಂ ಸಿದ್ದರಾಮಯ್ಯ, ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡಲಿದ್ದು, ಸಿಎಂ ಸಿದ್ದರಾಮಯ್ಯಗೆ ಸಚಿವರು, ಶಾಸಕರು ಸಾಥ್ ನೀಡಲಿದ್ದಾರೆ. ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ದೇವಾಲಯದ ಎಡ ಭಾಗದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ವೇದಿಕೆ ಮುಂಭಾಗ ಸಾರ್ವಜನಿಕರು ಕೂರಲು 3ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವೇದಿಕೆ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ನಾಳಿನ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಲಾಗಿದ್ದು, ಪಾಲಿಕೆಯಿಂದ ಪ್ರತಿನಿತ್ಯ ಸ್ವಚ್ಛತಾ ಕಾರ್ಯ ನಡೆಯುತ್ತದೆ. ವೇದಿಕೆ ಮುಂಭಾಗ ಸಾರ್ವಜನಿಕರಿಗೆ 3ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ದಸರಾ ಉದ್ಘಾಟನೆ ಕಾರ್ಯಕ್ರಮವನ್ನ ಲೈವ್ ಸ್ಟಿರ್ಮ್ ಕೊಡಲಾಗುತ್ತಿದೆ. ಸಿಎಂ, ಸಚಿವರು ಬರುವ ಕಾರಣ ಪ್ರೊಟೋಕಲ್ ಇರುತ್ತದೆ. ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ನಿರ್ಬಂಧ ಇರಲ್ಲ. ಹತ್ತು ದಿನಗಳ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ. ಸಾರ್ವಜನಿಕ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಡಿಸಿ ಲಕ್ಷ್ಮಿಕಾಂತ ರೆಡ್ಡಿ ಹೇಳಿದರು.
Key words: Inauguration, Mysore Dasara, DC, preparations