ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ- ಡಿಸಿಎಂ ಅಶ್ವಥ್ ನಾರಾಯಣ್.

ಬೆಂಗಳೂರು,ಜೂನ್,21,2021(www.justkannada.in):  ಯೋಗ ಶಿಕ್ಷಣವನ್ನು ರಾಜ್ಯದ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದರು.jk

ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ,  ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಾಗೂ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಪಾಲ್ಗೊಂಡು ಮಾತನಾಡಿದರು.

“ಮನುಕುಲದ ಮಾನಸಿಕ- ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ. ಮಕ್ಕಳ ಏಕಾಗ್ರತೆ ಮತ್ತು ಬೆಳವಣಿಗೆಗೆ ಇದು ಅತಿ ಹೆಚ್ಚು ಪರಿಣಾಮಕಾರಿ” ಎಂದರು.

ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಪಠ್ಯವನ್ನಾಗಿ ಅಳವಡಿಸುವ ಅಂಶವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ವಹಿಸಿದೆ. ಮಕ್ಕಳು ಆರಂಭದಿಂದಲೇ ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸುವುದರ ಜತೆಗೆ, ಯೋಗದ ಮೂಲಕ ದೈಹಿಕ-ಮಾನಸಿಕವಾಗಿ ಸದೃಢರಾಗಲಿದ್ದಾರೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ರಾಜ್ಯ ಒಲಿಂಪಿಕ್‌ ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಗೋವಿಂದರಾಜು ಅವರು ಯೋಗವನ್ನು ಶಿಕ್ಷಣದ ಪಠ್ಯದಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅದಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಸ್ಪಂದಿಸಿ ಈ ಪ್ರತಿಕ್ರಿಯೆ ನೀಡಿದರು.

ಯೋಗ ಸೀಮಿತವಾದುದಲ್ಲ- ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ

ಯೋಗ ದಿನಾಚರಣೆಗೆ ಸಾನ್ನಿಧ್ಯ ವಹಿಸಿ ಆಸೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು, “ಯೋಗವು ಯಾವುದೇ ದೇಶ, ಜಾತಿ, ಧರ್ಮಕ್ಕೆ ಸೀಮಿತವಾದುದ್ದಲ್ಲ. ಇದು ಮನುಷ್ಯನ ಅಸ್ತಿತ್ವಕ್ಕೆ ಸೇರಿರುವಂಥದ್ದು. ಮನುಷ್ಯನನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ಯಲು ನಮ್ಮ ಹಿರಿಯರು ಸಂಶೋಧಿಸಿದ ವಿಜ್ಞಾನವೇ ಯೋಗ” ಎಂದು ನುಡಿದರು.

ಯೋಗ ಭಾರತಕ್ಕೆ ಸೇರಿದ್ದು ಎಂದು ಜಗತ್ತು ಅದನ್ನು ಬಳಸದೇ ಇರಬಾರದು. ಹಾಗೆ ಮಾಡಿದರೆ ಜಗತ್ತಿಗೇ ನಷ್ಟ. ಯುರೋಪಿಯನ್‌ ವಿಜ್ಞಾನಿ ಲಾವಾಶಿಯರ್‌ ಅವರು ಆಮ್ಲಜನಕವನ್ನು ಸಂಶೋಧಿಸಿದರು ಎಂಬ ಕಾರಣಕ್ಕೆ ನಾವು ಅದನ್ನು ಬಳಸದೇ ಇದ್ದರೆ ನಮಗೇ ನಷ್ಟ. ಹಾಗೆಯ ಯೋಗವೂ ಕೂಡ. ಯೋಗ ಜಗತ್ತಿನ ಪ್ರತಿಯೊಬ್ಬರ ಜೀವನ ಶೈಲಿ ಆಗಬೇಕು ಎಂದು ಸ್ವಾಮೀಜಿ ಅವರು ಆಶಯ ವ್ಯಕ್ತಪಡಿಸಿದರು.

ವಚನಾನಂದ ಶ್ರೀಗಳಿಂದ ಯೋಗ ಮಾರ್ಗದರ್ಶನ:

ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಯೋಗ ಮಾರ್ಗದರ್ಶನ ನೀಡಿದರು. ಯೋಗ ಪಟುಗಳಿಂದ ಶ್ರೀಗಳವರು ʼಕಟ್ಟಿ ಚಕ್ರಾಸನʼ, ʼತ್ರಿಕೋನಾಸನʼ, ʼಊರ್ಧ್ವ ತಾಡಾಸನʼ, ʼಪಾದ ಹಸ್ತಾಸನʼ, ʼಉಸ್ಟ್ರಾಸನʼ, ʼಶಶಾಂಕಾಸನʼ, ʼಮಂಡೂಕಾಸನʼ, ʼಮಕರಾಸನʼ, ʼಭುಜಂಗಾಸನʼ, ʼಬಾಲ ಕ್ರೀಡಾಸನʼ, ʼಶಲ್ಬಾಸನʼ, ʼಉತ್ಥಾನ ಪಾದಾಸನʼ, ʼಅರ್ಧಪವನ ಮುಕ್ತಾಸನʼ, ʼಪವನ ಮುಕ್ತಾಸನʼ ಜತೆಗೆ, ʼಕಪಾಲಬಾತಿʼ, ʼಪ್ರಾಣಯಾಮʼ, ʼನಾಡಿ ಶೋಧನʼ, ʼಶೀಥಲಿ ಪ್ರಾಣಯಾಮʼ, ʼಭ್ರಾಮರಿ ಪ್ರಾಣಯಾಮʼ ಮಾಡಿಸಿದರು.‌

ಕ್ರೀಡಾ ಮತ್ತು ಯವಜನ ಸಬಲೀಕರಣ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌ ಪ್ರಭಾಕರ್, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ಯೋಗಾಸನ ಮಾಡುವುದನ್ನು ಕಾಲೇಜು ಶಿಕ್ಷಣ ಇಲಾಖೆಯ ವಿಜಯಿಭವ ಚಾನೆಲ್ ನಲ್ಲಿ ನೇರ ಪ್ರಸಾರ ಮಾಡಲಾಯಿತು.

ENGLISH SUMMARY…..

International Yoga Day Celebrated, Thousands participated virtually
Yoga should be made a part of the academic curriculum: Sri Nirmalanandanatha Swamiji

Bengaluru: The academic curriculum of students should have contents that motivate one towards realizing the importance of Ashtanga Yoga, Sri Jagadguru Nirmalanandanatha Swameeji of Adichunchanagiri mutt, said on Monday.

In his inaugural address of the 7th International Yoda Day celebrated on behalf of the government at Kantheerava indoor stadium, he told, Yoga belongs to the entire world and humanity.

Yoga is not bounded to any religion but it is related to the way to attain the supreme status of one’s own existence. Yoga which evolved in our land is not limited to physical exercise. Yoga is a broader notion and it means attaining liberation from all sorts of bondages through knowledge. It is a step towards meditation and reaching tranquility, the seer explained.

Yoga helps to turn a disintegrated personality into an integrated one. Yoga is about bringing organization and unification in ones’ approach towards life and the universe, he said.

DyCM and Higher education Minister, Dr.C.N.Ashwatha Narayana, told, the national education policy, provides largers space and scope to include Yoga in the academic curriculum.

Yoga is a universal concept, it helps a person to manage himself and to lead a meaningful life. Apart from this it helps to bring betterment in the society, he opined.

Govindaraju, MLC & President, Karnataka Olympic Association, urged the government to make yoga a compulsory subject in the academic curriculum.

Later, Under the guidance of Sri Vachanananda Swamiji various Yogasanas such as Kathi Chakrasana, Konasana, Trikonasana, Utkathasana, Vrukshasana, Padahastasana, Makarasana, Bhujangasana, BaalaKreedasana, Shalabhasana, Utthana Padasana, Pavana Muktasana and Pranayama, Kapalabhati, Naadishodhana, Bhramari Pranayama were performed. About 100 yoga practitioners participated physically and Covid-19 guidelines were adhered to.

K.Narayana Gowda, Minister, Dept. of Youth Empowerment and Sports, Shalini Rajaneesh, ACS to the government, P.Pradeep, Commissioner, Dept. of Collegiate Education were among those present.

The event was live-streamed through a social media platform and thousands of people participated virtually. The event was jointly organized by departments of Higher Education, Public Instructions, Youth Empowerment and Sports, Ayush and Karnataka Olympic Association.

Key words: Incorporation – Yoga Education – curriculum-DCM- Ashwath Narayan.