ಬೆಂಗಳೂರು,ಫೆ,27,2020(www.justkannada.in): ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದಕ್ಕೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ ನೀಡಿದ್ದಾರೆ.
ಸಾರಿಗೆ ನಿಗಮಗಳು ನಷ್ಟದಲ್ಲಿದ್ದವು. ಹೀಗಾಗಿ ನಷ್ಟವನ್ನ ಸರಿದೂಗಿಸಲು ಬಸ್ ಪ್ರಯಾಣ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಟೀಕಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ ಡಿಸಿಎಂ ಲಕ್ಷ್ಮಣ್ ಸವದಿ, ಬಸ್ ಪ್ರಯಾಣ ದರ ಏರಿಕೆಯನ್ನ ಕುಮಾರಸ್ವಾಮಿ ಅವರು ನೋಡಿಲ್ಲವೇ..? ಪ್ರಯಾಣಿಕರಿಗೆ ಹೊರೆಯಾಗದಂತೆ ದರ ಏರಿಕೆ ಮಾಡಿದ್ದೇವೆ. 2014ರಿಂದಲೂ ಬಸ್ ಪ್ರಯಾಣ ದರ ಏರಿಕೆ ಮಾಡಿಲ್ಲ. ಹೀಗಾಗಿ ಸಾರಿಗೆ ನಿಗಮಗಳು ನಷ್ಟದಲ್ಲಿವೆ. ನಷ್ಟ ಸರಿದೂಗಿಸಲು ಪ್ರಯಾಣ ದರ ಏರಿಕೆ ಮಾಡಲಾಗಿದೆ ಎಂದರು.
ಬಿ.ಎಸ್. ಯಡಿಯೂರಪ್ಪ ಮುಂದಿನ ಮೂರುವರೆ ವರ್ಷ ಸಿಎಂ ಆಗಿರುತ್ತಾರೆ. ಯಾವುದೇ ಅನುಮಾನ ಬೇಡ. ಸಿಎಂ ಬಿಎಸ್ ವೈ ಪರ ವಿರೋಧ ಯಾವುದೇ ಪತ್ರ ಹೈಕಮಾಂಡ್ ಗೆ ಹೋಗಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಭಿಪ್ರಾಯಗಳು ಯಡಿಯೂರಪ್ಪರಿಂದ ಕರ್ನಾಟಕಕ್ಕೆ ಇನ್ನಷ್ಟು ಅಭಿವೃದ್ಧಿ ಕೆಲಸವಾಗಬೇಕು ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದರು.
Key words: increase –bus- fares- DCM- Laxman Savadi