ಕೇಂದ್ರ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯ ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ- ಡಿಸಿಎಂ ಅಶ್ವಥ್ ನಾರಾಯಣ್.

ಬೆಂಗಳೂರು,ಜುಲೈ,22,2021(www.justkannada.in):  ರಾಷ್ಟ್ರೀಯ ಮಟ್ಟದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದಕ್ಕೆ ರಾಜ್ಯ ಸರಕಾರವು ದೇಶದ ಹೆಸರಾಂತ ಆನ್‌ಲೈನ್‌ ಕಲಿಕಾ ವೇದಿಕೆ ʼಅನ್‌ ಅಕಾಡೆಮಿʼ ಜತೆ ಒಪ್ಪಂದ ಮಾಡಿಕೊಂಡಿತು.jk

ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ಅವರ ಸಮಕ್ಷಮದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌ ಪ್ರಭಾಕರ್‌ ಹಾಗೂ ಅನ್‌ ಅಕಾಡೆಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿವೇಕ್‌ ಸಿನ್ಹಾ ಒಪ್ಪಂದಕ್ಕೆ ಸಹಿ ದಾಖಲೆಗಳನ್ನು ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ್ ಅವರು; ಈ ಒಪ್ಪಂದವು ಮೂರು ವರ್ಷ, ಅಂದರೆ 2021ರಿಂದ 2024ರವರೆಗೆ ಜಾರಿಯಲ್ಲಿರುತ್ತದೆ. ಈ ಮೂರು ವರ್ಷಗಳ ಅವಧಿಯಲ್ಲಿ ಪ್ರತೀ ವರ್ಷ 1,500 ವಿದ್ಯಾರ್ಥಿಗಳಂತೆ ಒಟ್ಟು 4,500 ವಿದ್ಯಾರ್ಥಿಗಳಿಗೆ ಅನ್‌ ಅಕಾಡೆಮಿ ಉಚಿತ ತರಬೇತಿ ನೀಡಲಿದೆ ಎಂದರು.

ಪ್ರತಿ 6 ತಿಂಗಳಿಗೊಮ್ಮೆ ಆನ್‌ ಲೈನ್‌ ಪರೀಕ್ಷೆಗಳನ್ನು ನಡೆಸಿ ಅದರಲ್ಲಿ ಆಯ್ಕೆಯಾಗುವ 750 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು ಹಾಗೂ ಆ ವಿದ್ಯಾರ್ಥಿಗಳನ್ನು ಯಾವುದೇ ಶುಲ್ಕವಿಲ್ಲದೆ ಅನ್‌ ಅಕಾಡೆಮಿ ಚಂದಾದಾರರನ್ನಾಗಿ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ್ ಮಾಹಿತಿ ನೀಡಿದರು.

ಸರಕಾರಿ ಪದವಿ, ಸ್ನಾತಕೋತ್ತರ, ಎಂಜನಿಯರಿಂಗ್‌, ಪಾಲಿಟೆಕ್ನಿಕ್‌ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷ ಅಥವಾ ಫ್ರೀ ಫೈನಲ್‌ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳು ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

ಪ್ರಸ್ತುತ ಕೇಂದ್ರ ಆಡಳಿತ ಸೇವೆ, ಬ್ಯಾಂಕಿಂಗ್‌, ಗ್ರೂಪ್‌ ಸಿ ಸೇರಿದಂತೆ ವಿವಿಧ ವಲಯಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳಿಗೆ ಪ್ರತಿ ವರ್ಷ ಕೇಂದ್ರ ಸರಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳುತ್ತಿದೆ. ಆದರೆ, ಈ ಆಯ್ಕೆಯಲ್ಲಿ ಕನ್ನಡದ ವಿದ್ಯಾರ್ಥಿಗಳು ಹಿಂದೆ ಬೀಳುತ್ತಿದ್ದಾರೆ. ಇದನ್ನು ಸರಿಪಡಿಸುವ ಉದ್ದೇಶದಿಂದ ಅನ್‌ ಅಕಾಡೆಮಿ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಅಶ್ವಥ್ ನಾರಾಯಣ್ ವಿವರಿಸಿದರು.

ಈ ಕೋಚಿಂಗ್‌ ಮೂಲಕ ನಮ್ಮ ವಿದ್ಯಾರ್ಥಿಗಳ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲಾಗುವುದು. ಉತ್ತಮ ಫಲಿತಾಂಶ ಸಾಧಿಸಲಾಗುವುದು ಎಂದು ಅವರು ಹೇಳಿದರು.

ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಸೇರಿ ಇನ್ನು ಕೆಲ ಗಣ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ENGLISH SUMMARY…..

To facilitate placement of Kannadigas in the administrative and public domain services

DCTE enters pact with Unacademy for online training

Bengaluru: To enhance the Competitive Examination ability of students and placing a sizeable number of Kannadigas in the Administrative and public domain Services of the governments, a Memorandum of Understanding (MoU) was inked between the Department of Collegiate and Technical Education (DCTE) and leading online learning platform Unacademy, on Thursday.

Speaking on the occasion, DyCM, Dr.C.N.Ashwathnarayana, and Minister for Higher Education told, this pact is expected to better prepare students to benefit from the opportunities of around 3 lakh Jobs every year for which several government departments are issuing notifications.

The aspiration behind this program is to hone the intellect, ability, and talent of Kannadiga students through expert training so that their potential is identified at the National/State level in the Administrative Services of the Central and State Governments and Services like Banking, Group, etc, he explained.

Under this MoU, Coaching for Competitive Examinations will be given to 1500 students every year for a period of 03 years (2021-2024) and 4500 students will be trained. Students will be selected for this training program based on their performance in the Online examination conducted twice a year with a 06 months gap in between, Narayana told.

Scholarships will be given to students selected and will also be given a free subscription to Unacademy Plus. The potential beneficiaries of this program are the Final Year or pre-Final students of UG/PG of Government First Grade Colleges, Polytechnics, Engineering Colleges, and Universities.

MoU signed by P.Pradeep, Commissioner, DCTE, and Vivek Sinha, chief operating officer of Unacademy was exchanged between the government and the company.

Kumar Nayak, ACS to higher education and othre dignitaries were present on the occasion.

Key words: increase -capacity – state- students – central -competitive exams-DCM Ashwath Narayan