ಮೈಸೂರು,ಆಗಸ್ಟ್,27,2020(www.justkannada.in): ಅರಮನೆ ನಗರಿ ಮೈಸೂರಿನಲ್ಲಿ ಕಳೆದೆರಡು ದಿನಗಳಿಂದ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು ಈ ಹಿನ್ನೆಲೆ ಆತಂಕಗೊಂಡಿರುವ ಜನರು ಸ್ವಯಂ ಪ್ರೇರಿತರಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.
ಕಳೆದ ಎರಡು ದಿನದ ಹಿಂದೆ ಮೈಸೂರಿನಲ್ಲಿ ಕೊರೋನಾ ಪ್ರಕರಣ ಸಾವಿರ ಗಡಿ ದಾಟಿತ್ತು. ನಿನ್ನೆ 951 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಇನ್ನು ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಮೈಸೂರಿನ ಜನತೆ ಭಯಭೀತರಾಗಿದ್ದಾರೆ ಹೀಗಾಗಿ ಸ್ವಯಂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಕೊರೊನಾ ಟೆಸ್ಟ್ ಕೇಂದ್ರಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ.
ಮೈಸೂರಿನ ಟೌನ್ ಹಾಲ್ ನಲ್ಲಿ ಶಂಕಿತರು ನೂರಾರು ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿದೆ. ಆರೋಗ್ಯದಲ್ಲಿ ಕೊಂಚ ಏರುಪೇರಾದರೂ ಮೈಸೂರು ಜನತೆ ಹೆದರುತ್ತಿದ್ದು, ಕೊರೋನಾ ಸೋಂಕಿನ ಯಾವುದೇ ಲಕ್ಷಣ ಕಂಡು ಬಂದರೂ ಮುನ್ನೆಚ್ಚರಿಕೆಯಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಕೋವಿಡ್ ಟೆಸ್ ಕೇಂದ್ರಗಳ ಬಳಿ ಧಾವಿಸುತ್ತಿದ್ದಾರೆ.
Key words: Increase – Corona case –Mysore- People – Covid test.