ಬೆಂಗಳೂರು, ಸೆಪ್ಟಂಬರ್,22,2020(www.justkannada.in): ಕೊರೋನಾ ಸಾವಿನ ಪ್ರಮಾಣ ಹೆಚ್ಚಾಗಿದೆ. ಸಾವಿನ ಪ್ರಮಾಣದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.
ಕೊರೊನಾ ನಿಯಂತ್ರಣ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಹಾಗೂ ಕೋವಿಡ್ ಕಿಟ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪದ ಪ್ರಕರಣ ಕುರಿತು ಇಂದು ವಿಧಾನಸಭೆ ಕಲಾಪದಲ್ಲಿ ಚರ್ಚಿಸಲಾಯಿತು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೊರೋನಾ ಸೋಂಕು ಯಾರಿಗೂ ಬರೋದು ಬೇಡ. ಕೊರೋನಾ ಸೋಂಕು ಬಂದರೇ ಮಾನಸಿಕವಾಗಿ ಕುಗ್ಗುತ್ತಾರೆ. ಮನೆಯವರಿಂದ ದೂರ ಇರಬೇಕಾಗುತ್ತದೆ. ವಿಲ್ ಪವರ್ ಇದ್ದರೇ ಕೊರೋನಾದಿಂದ ಬೇಗ ಚೇತರಿಸಿಕೊಳ್ಳಬಹುದು. ಇನ್ನು ಕೇರ್ ಲೆಸ್ ಮಾಡಿದ್ರೆ ಕೊರೋನಾ ಬರುತ್ತೆ ಎಂದರು.
ಕೊರೋನಾ ಸಾವಿನ ಪ್ರಮಾಣ ಹೆಚ್ಚಾಗಿದೆ. ಸಾವಿನ ಪ್ರಮಾಣದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದೆ ಎಂದು ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು. ಆದರೆ ಈ ಆರೋಪವನ್ನು ತಳ್ಳಿ ಹಾಕಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ ಕಡಿಮೆಯಾಗುತ್ತಿದೆ. ಬೇರೆ ದೇಶಕ್ಕೆ ಹೋಲಿಸಿಕೊಂಡರೇ ನಮ್ಮ ದೇಶದಲ್ಲಿ ಸಾವಿನ ಪ್ರಮಾಣ ಕಡಿಮೆ ಎಂದು ಉತ್ತರ ನೀಡಿದರು.
Key words: Increase – corona -death rates – state- Opposition leader- Siddaramaiah