ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ: ಕೊರೋನಾ ನಿಯಮ ಪಾಲನೆ ಕಡ್ಡಾಯ- ಮೈಸೂರು ಡಿಸಿ ರೋಹಿಣಿ ಸಿಂಧೂರಿ…

ಮೈಸೂರು,ಮಾರ್ಚ್,18,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.jk

ಈ ಕುರಿತು ಮಾತನಾಡಿರುವ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ರಾಜ್ಯದಲ್ಲಿ ಕೋವಿಡ್-19 ಸೋಂಕು ಮತ್ತೆ ಹೆಚ್ಚಳಗೊಂಡಿದ್ದು, ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇದರ ಜೊತೆಗೆ ಪಕ್ಕದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯದಲ್ಲಿ ಕೂಡ ಸೋಂಕು ಹೆಚ್ಚಾಗುವ ಭೀತಿ ಎದುರಾಗಿದ್ದು, ಎರಡನೇ ಅಲೆಯನ್ನು ಎದುರಿಸುವಂತಹ ಆತಂಕ ಸೃಷ್ಟಿಸಿದೆ.

ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು, ಈ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರು ಈ ಸಾಂಕ್ರಾಮಿಕವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ಲಕ್ಷಿಸದೆ, ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.

60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಕೋವಿಡ್ ಲಸಿಕೆ ಪಡೆಯಿರಿ…

ಯಾವುದೇ ಜ್ವರ, ಕೆಮ್ಮು, ಶೀತ, ತಲೆನೋವಿನಂತಹ ಕೋವಿಡ್-19 ರೋಗದ ಗುಣಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಇದಲ್ಲದೆ, 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಹಾಗೂ ಯಾವುದಾದರೂ ದೀರ್ಘಕಾಲಿನ ಕಾಯಿಲೆಗಳಿಂದ  (comorbidities)  ಬಳಲುತ್ತಿರುವ 45 ರಿಂದ 60 ವರ್ಷ ವಯೋಮಾನದವರು ಕಡ್ಡಾಯವಾಗಿ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಡಿಸಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ, ದೇವಸ್ಥಾನಗಳಿಗೆ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಕೋವಿಡ್-19 ಹರಡದಂತೆ ತಡೆಗಟ್ಟಲು ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಜಾರಿಮಾಡಿರುವ ಹೊಸ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಮದುವೆ, ಸಭೆ ಸಮಾರಂಭಗಳು, ಜಾತ್ರೆ-ಉತ್ಸವಗಳು, ಇಂತಹ ಕಾರ್ಯಕ್ರಮಗಳಲ್ಲಿ  (superspreader event)  ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಾವಿರಾರು ಜನರು ಬಂದು-ಹೋಗುವುದರಿಂದ ಕೋವಿಡ್-19 ಬಹುಬೇಗ ವ್ಯಾಪಕವಾಗಿ ಹರಡುತ್ತದೆ. ಆದ್ದರಿಂದ ಇಂತಹ ಜನಸಂದಣಿ ಪ್ರದೇಶಗಳಿಂದ ದೂರ ಇರಬೇಕಾಗಿದೆ ಎಂದಿದ್ದಾರೆ.

ಸಾರ್ವಜನಿಕರು ಎಚ್ಚರಿಕೆ ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯಬೇಕು…

ಈ ನಡುವೆ ಕಳೆದ 2020ರ ಜುಲೈ ತಿಂಗಳಲ್ಲಿ ಮೈಸೂರು ನಗರದಲ್ಲಿ ಇದ್ದಂತಹ ಕೋವಿಡ್-19 ಪರಿಸ್ಥಿತಿ ಈಗ ಮರುಕಳಿಸಿದೆ. ಕಳೆದ 2021ರ ಫೆಬ್ರವರಿ 26 ರಿಂದ ಮಾರ್ಚ್ 4ರ ಅವಧಿಯಲ್ಲಿ ಮೈಸೂರಲ್ಲಿ 127 ಪ್ರಕರಣಗಳು ದಾಖಲಾಗಿದ್ದವು. ಮಾರ್ಚ್ 5ರಿಂದ ಮಾರ್ಚ್ 11ರ ಅವಧಿಯಲ್ಲಿ ಈ ಪ್ರಕರಣ 185ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಎಲ್ಲರೂ ಜಾಗೃತಿ ವಹಿಸಬೇಕಾಗಿದೆ

ಕರ್ನಾಟಕದಲ್ಲಿ ಕುಲಬುರ್ಗಿ, ಬೀದರ್, ಮತ್ತು ಬೆಂಗಳೂರು ನಗರ ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ತುಂಬಾ ಏರುಗತಿಯಲ್ಲಿ ಇವೆ. ಮೈಸೂರಿಗೆ ಅಂತಹ ಪರಿಸ್ಥಿತಿ ಬರದಂತೆ ನಿಯಂತ್ರಣ ಮಾಡುವುದಕ್ಕೆ ಸಾರ್ವಜನಿಕರ ಸಹಕಾರ ಬೇಕಾಗಿದೆ. ಪರಿಸ್ಥಿತಿ ಗಂಭೀರ ಹಂತ ತಲುಪುವ ಮೊದಲೇ ಸಾರ್ವಜನಿಕರು ಎಚ್ಚರಿಕೆ ವಹಿಸುವ ಮೂಲಕ ಸೋಂಕು ಹರಡದಂತೆ ತಡೆಗಟ್ಟಬೇಕಿದೆ ಎಂದು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.Increase – corona- infection -again –covid rule – compulsory-Mysore DC- Rohini Sindhuri.

ಮೈಸೂರಿನ ಪ್ರಜ್ಞಾವಂತ ನಾಗರಿಕರ ಸಹಕಾರದಿಂದಾಗಿ ಕಳೆದ ವರ್ಷ ಜಿಲ್ಲಾದ್ಯಾಂತ ಸೋಂಕು ನಿಯಂತ್ರಿಸಲು ಸಾಧ್ಯವಾಗಿತ್ತು. ಅದರಂತೆ ಈ ಬಾರಿಯೂ ಕೂಡ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಸರ್ಕಾರ ಇತ್ತೀಚಿಗೆ ಹೊರಡಿಸಿದ ಕೋವಿಡ್-19ರ ನಿಯಮಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಸಹಕಾರ  ನೀಡಬೇಕು ಎಂದು ಸಾರ್ವಜನಿಕರಲ್ಲಿ ಡಿಸಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ENGLISH SUMMARY…

Increase in corona cases in State: Mysuru DC orders citizens to follow guidelines
Mysuru, Mar. 18, 2021 (www.justkannada.in): Following an increase in the number of Corona cases in the Mysuru District day-by-day, Mysuru Deputy Commissioner Rohini Sindhuri today has issued orders to the citizens both in the City and rural areas to follow guidelines compulsorily like wearing mask and maintaining social distancing.
Speaking to the media persons today Rohini Sindhuri expressed her view that there is a fear of a second wave of the COVID-19 Pandemic in the State, following the increase in corona cases in the neighboring states Maharashtra and Kerala.Increase – corona- infection -again –covid rule – compulsory-Mysore DC- Rohini Sindhuri.
“The citizens are requested to compulsorily follow the guidelines like wearing mask and maintaining social distancing. It is more important in rural areas to prevent the spread of pandemic,” she said.
On the occasion, she also requested all those who are above 60 years of age should take the COVID vaccination and immediately report to the nearest hospital in case of any symptoms.
Keywords: Mysuru DC Rohini Sindhuri/ COVID-19 Pandemic/ guidelines/ compulsory/ mask/ Social distancing

Key words: Increase – corona- infection -again –covid rule – compulsory-Mysore DC- Rohini Sindhuri.