ಬೆಂಗಳೂರು.ಅಕ್ಟೋಬರ್,25,2022(www.justkannada.in): ಎಸ್.ಸಿ ಮತ್ತು ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ತರಾತುರಿಯಲ್ಲಿ ಸುಗ್ರಿವಾಜ್ಞೆ ಹೊರಡಿಸಿದ್ದೇಕೆ..? ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಎಸ್ ಸಿ, ಎಸ್ಟಿ ಮೀಸಲಾತಿ ಹೆಚ್ಚಳ, ಇದು ಬಿಜೆಪಿಯವರ ಕಣ್ಣೋರೆಸೋ ತಂತ್ರ. ಅಧಿವೇಶನ ಕರೆದು ಬಿಲ್ ಪಾಸ್ ಮಾಡಬೇಕಿತ್ತು. ನಾಗಮೋಹನ್ ವರದಿ ಸಲ್ಲಿಸಿ ಎಷ್ಟು ವರ್ಷ ಆಗಿದೆ. ಇಷ್ಟು ವರ್ಷವಾದರೂ ಏಕೆ ಮೀಸಲಾತಿ ಹೆಚ್ಚಿಸಲಿಲ್ಲ. ಮೀಸಲಾತಿ ಹೆಚ್ಚಳಕ್ಕೆ ಈಗ ತರಾತುರಿಯಲ್ಲಿ ಸುಗ್ರಿವಾಜ್ಞೆ ಹೊರಡಿಸಿದ್ದುಯಾಕೆ..? ಮೂರ್ನಾಲ್ಕು ಬಾರಿ ನಾವು ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿದ್ದವು. ನಮ್ಮ ಹೋರಾಟಕ್ಕೆ ಈಗ ಫಲ ಸಿಕ್ಕಿದೆ ಎಂದರು.
ಹಾಗೆಯೇ ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ. ಹೀಗಾಗಿ 9ನೇ ಶೇಡ್ಯೂಲ್ ಗೆ ಸೇರಿಸಬೇಕಲ್ವಾ ಬಿಜೆಪಿ ಎಂದೂ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.
Key words: increase -SC and ST- reservation- Siddaramaiah – against -BJP.