ಮೈಸೂರು,ಜು,20,2020(www.justkannada.in): ಜಿಲ್ಲೆಯಲ್ಲಿ ಕೋವಿಡ್ -19 ನಿಂದ ಅತಿ ಹೆಚ್ಚಿನ ಜನರು ಸಾವನ್ನಪ್ಪುತ್ತಿರುವ ಹಿನ್ನೆಲೆ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಎಸ್ ಡಿಪಿಐ ಆಗ್ರಹಿಸಿದೆ.
ಈ ಕುರಿತು ನಗರದ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ಸೋಂಕಿತರು ಚಿಕಿತ್ಸೆಗೆ ಹೋದಾಗ ಸೋಂಕಿತರನ್ನು ದಾಖಲಿಸುಕೊಳ್ಳುವಲ್ಲಿ ವಿಳಂಬ ಮಾಡುತ್ತಿದ್ದಾರೆ. ಜೊತೆಗೆ ಸೂಕ್ತ ಚಿಕಿತ್ಸೆ ಮತ್ತು ಆರೈಕೆಯಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಕುಟುಂಬಸ್ಥರಿಗೆ ರೋಗಿಯ ಸ್ಥಿತಿಗತಿಯ ಬಗ್ಗೆ ಸಮರ್ಪಕ ಮಾಹಿತಿ ನೀಡುತ್ತಿಲ್ಲವೆಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಜೊತೆಗೆ ನಿರ್ದಿಷ್ಟ ಸಮುದಾಯವೊಂದರಲ್ಲಿ ಅತಿ ಹೆಚ್ಚು ಸಾವು ಸಂಭವಿಸಿರುವುದು ಆ ಸಮುದಾಯದಲ್ಲಿ ಆತಂಕ ಸೃಷ್ಟಿಸಿದೆ. ಆದ್ದರಿಂದ ಈ ಕೂಡಲೇ ಕೋವಿಡ್ 19ರ ಸಾವಿನ ಪ್ರಕರಣಗಳ ಬಗ್ಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವೈದ್ಯಕೀಯ ಪರಿಣಿತರನ್ನು ಒಳಗೊಂಡ ಸಮಿತಿ ಅಡಿಯಲ್ಲಿ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಹಾಗೆಯೇ ಕೋವಿಡ್ 19 ರೋಗಿಗಳ ಚಿಕಿತ್ಸೆ ಮತ್ತು ಆರೈಕೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಆದ್ದರಿಂದ ಸಿಸಿಟಿವಿ ಅಡಿಯಲ್ಲಿ ಇವರ ನಿರ್ವಹಣೆ ಆಗಬೇಕು. ಸಾರ್ವಜನಿಕ ವಲಯದಿಂದ ನಾಗರೀಕ ಪ್ರತಿನಿಧಿಗಳನ್ನು ಒಳಗೊಂಡ ಕೋವಿಡ್ 19 ರ ವಿಚಕ್ಷಣಾ ಸಮಿತಿ ರಚಿಸಬೇಕು ಎಂದು ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಆಗ್ರಹಿಸಿದರು.
Key words: Increasing – deaths – covid – Mysore -SDPI -demands – investigation.