ಮೂರನೇ ದಿನಕ್ಕೆ ಕಾಲಿಟ್ಟ ಗುತ್ತಿಗೆ, ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಹೊರಾಟ

ಬೆಂಗಳೂರು,ಸೆಪ್ಟೆಂಬರ್,26,2020(www.justkannada.in) : ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆರೋಗ್ಯ, ವೈದ್ಯಕೀಯ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘ (ಬಿ.ಎಂ.ಎಸ್ ಸಂಯೋಜಿತ) ದಿಂದ ನಡೆಸಲಾಗುತ್ತಿರುವ ಅಸಹಕಾರ ಚಳುವಳಿ (ಕೆಲಸ ಸ್ಥಗಿತ ಹೋರಾಟ) ಮೂರನೇ ದಿನ ಪೂರೈಸಿದೆ.jk-logo-justkannada-logo

ಹಲವಾರು ವರ್ಷಗಳಿಂದ ನ್ಯಾಯಯುತವಾದ ಬೇಡಿಕೆಗಳು ಈಡೇರಿಸುವಂತೆ ಎಲ್ಲ ಹಂತಗಳಲ್ಲಿ ಹೋರಾಟ ನಡೆಸಿದರೂ ಸಹ  ಸರಕಾರ ಸ್ಪಂದಿಸುತ್ತಿಲ್ಲ. ಸರ್ಕಾರದ ನೌಕರರ ವಿರೋಧಿ ಧೋರಣೆ ಹಾಗೂ ಒಡೆದು ಆಳುವ ಕಾರ್ಯ ಕುರಿತು ಸಂಘದ ರಾಜ್ಯಾಧ್ಯಕ್ಷ ಎಚ್.ವೈ.ವಿಶ್ವರಾಧ್ಯ ಬೇಸರವ್ಯಕ್ತಪಡಿಸಿದ್ದಾರೆ.

ಕೊರೋನಾ ವೈರಸ್ ಹಾವಳಿ ಸಂದರ್ಭದಲ್ಲಿಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದರೂ ಅಂತಹ ಬಡ ನೌಕರರ ಬೇಡಿಕೆಗಳ ಈಡೇರಿಕೆ ಬಗ್ಗೆ ಸರಕಾರ ಗಮನಹರಿಸುತ್ತಿಲ್ಲ. ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿ ಈಗ ನೋಟೀಸ್ ಜಾರಿ ಮಾಡಿ ಹೋರಾಟ ಮತ್ತು ನ್ಯಾಯಯುತ ಹಕ್ಕುಗಳನ್ನು ದಮನ ಮಾಡಲು ಅಧಿಕಾರಿಗಳನ್ನು ಬಳಸಿಕೊಂಡು ನೌಕರರ ಆತ್ಮವಿಶ್ವಾಸದ ಮೇಲೆ ಗದಾ ಪ್ರಹಾರ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

indefinite-period-leasing-outsourcing-employees-third-day

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನಲ್ಲಿ ಸಮಾನ ಕೆಲಸಕ್ಕೆ ಸಮಾನ ವೇಥನದ ಬಗ್ಗೆ ಚರ್ಚಿಸಲಾಗಿದ್ದು, ಅದರಂತೆ ವೇತನವನ್ನು ನೀಡಬೇಕಿದೆ. ಆದರೆ, ಸರಕಾರವು ಈ ಆದೇಶವನ್ನೇ ಅನುಸರಿಸದೆ ಎಲ್ಲ ಗುತ್ತಿಗೆ ನೌಕರರಿಗೆ ಯಾವುದೆ ಸೌಲಭ್ಯ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

key words : indefinite-period-leasing-outsourcing-employees-third-day