ನವದೆಹಲಿ,ಜೂ,17,2020(www.justkannada.in): ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಜೂನ್ 19 ರಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಜತೆ ಪ್ರಧಾನಿ ಮೋದಿ ಭಾರತ ಮತ್ತು ಚೀನಾ ಸೈನಿಕರ ಸಂಘರ್ಷ ವಿಚಾರ ಕುರಿತು ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲಡಾಖ್ ಗಡಿಯಲ್ಲಿ ಚೀನಾ ಕಳೆದ ಕೆಲ ದಿನಗಳಿಂದ ಎಲ್ಲೆ ಮೀರಿ ವರ್ತನೆ ಮಾಡುತ್ತಾ ಬಂದಿತ್ತು. ಅದರಂತೆ ನಿನ್ನೆ ರಾತ್ರಿ ಚೀನಾ ಸೈನಿಕರು ಭಾರತದ ಗಡಿಯನ್ನ ದಾಟಿ ಬಂದಿದ್ದರು. ಈ ವೇಳೆ ಭಾರತೀಯ ಯೋಧರು ಅವರನ್ನ ತಡೆದು ಹಿಂದೆ ಸರಿಯುವಂತೆ ಹೇಳಿದ್ದರು. ಈ ವೇಳೆ ಭಾರತೀಯ ಸೇನೆ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಉಂಟಾಗಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಇನ್ನು ಈ ವೇಳೆ ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: India-China- conflict-Prime Minister- Narendra Modi – all-party- meeting